BREAKING NEWS | ಶಿವಮೊಗ್ಗ ಗಾಡಿಕೊಪ್ಪದಲ್ಲಿ ಯುವಕನ ಕೊಲೆ

SHIVAMOGGA LIVE NEWS

ಶಿವಮೊಗ್ಗ | ಬಾಟಲಿ ಮತ್ತು ಕಲ್ಲಿನಿಂದ ತಲೆಗೆ ಹೊಡೆದು ಯುವಕನನ್ನು ಹತ್ಯೆ (MURDER) ಮಾಡಲಾಗಿದೆ. ಮದ್ಯ ಸೇವನೆ ಮಾಡಿ, ಜಗಳ ತೆಗೆದುಕೊಂಡು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Shimoga Nanjappa Hospital

ಗಾಡಿಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆಯ ಕಿರಣ ಅಲಿಯಾಸ್ ಪುಚ್ಚಿ (23) ಎಂಬಾತನನ್ನು ಹತ್ಯೆ (MURDER) ಮಾಡಲಾಗಿದೆ. ಹೊಸಮನೆ ಬಡಾವಣೆಯ ಪ್ರಜ್ವಲ್ ಮತ್ತು ಗಾಡಿಕೊಪ್ಪದ ಕಾರ್ತಿಕ್ ಹತ್ಯೆ ಮಾಡಿದ್ದಾರೆ.

ಹೇಗಾಯ್ತು ಘಟನೆ

ಕಳೆದ ರಾತ್ರಿ ಕಿರಣ ಅಲಿಯಾಸ್ ಪುಚ್ಚಿ, ಪ್ರಜ್ವಲ್ ಮತ್ತು ಕಾರ್ತಿಕ್ ಜೊತೆಗೆ ಮದ್ಯ ಸೇವನೆ ಮಾಡಿದ್ದಾರೆ. ಬಳಿಕ ಕ್ಷುಲಕ ವಿಚಾರಕ್ಕೆ ಮೂವರು ಜಗಳವಾಡಿಕೊಂಡಿದ್ದಾರೆ. ಈ ವೇಳೆ ಪ್ರಜ್ವಲ್ ಮತ್ತು ಕಾರ್ತಿಕ್, ಕಿರಣನ ತಲೆಗೆ ಬಾಟಲಿ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡು ಕಿರಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪ್ರಜ್ವಲ್ ಮತ್ತು ಕಾರ್ತಿಕ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರಿಗೆ ಕಾದಿತ್ತು ಶಾಕ್, ಮುಖ್ಯ ಶಿಕ್ಷಕಿಯಿಂದ ಪೊಲೀಸರಿಗೆ ದೂರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment