BREAKING NEWS | ಗಾಂಧಿ ಬಜಾರ್’ನಲ್ಲಿ ಚಾಕು ಇರಿತ ಕೇಸ್, ಮಣಿಪಾಲದಲ್ಲಿ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 9 ಜೂನ್ 2022 (MURDER IN SHIMOGA)

ಗಾಂಧಿ ಬಜಾರ್ ಚೋರ್ ಬಜಾರ್’ನಲ್ಲಿ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಸೆಂದಿಲ್ ಕುಮಾರ್ ಇವತ್ತು ಮೃತಪಟ್ಟಿದ್ದಾರೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. (MURDER IN SHIMOGA)

Shimoga Nanjappa Hospital

ಕುಂಬಾರಗುಂಡಿಯ ಸೆಂದಿಲ್ ಕುಮಾರ್ (43) ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು.

ಎದೆಗೆ, ಹೊಟ್ಟೆ, ತೊಡೆಗೆ ತಿವಿದಿದ್ದರು

ಜೂನ್ 7ರಂದು ರಾತ್ರಿ 7 ಗಂಟೆಗೆ ಗಾಂಧಿ ಬಜಾರ್’ನ ಚೋರ್ ಬಜಾರ್’ನಲ್ಲಿ ಸೆಂದಿಲ್ ಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಎದೆ, ಕಿಬ್ಬೊಟ್ಟೆ, ತೊಡೆಗೆ ಮಚ್ಚು, ಭರ್ಚಿಯಿಂದ ದಾಳಿ ಮಾಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸೆಂದಿಲ್ ಕುಮಾರ್’ನನ್ನು ಕೂಡಲೆ ಮಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಸೆಂದಿಲ್ ಕುಮಾರ್’ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೆಂದಿಲ್ ಕುಮಾರ್ ಇವತ್ತು ಬೆಳಗ್ಗೆ ಮೃತಪಟ್ಟಿದ್ದಾರೆ.

ನಾಲ್ವರ ವಿರುದ್ಧ ಪ್ರಕರಣ ದಾಖಲು

ಸೆಂದಿಲ್ ಕುಮಾರ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಗಿ ಸಂತು, ರಮೇಶ, ಲೋಕೇಶ ಮತ್ತು ಅಪರಿಚತನೊಬ್ಬನ ಮೇಲೆ ದೂರು ನೀಡಲಾಗಿತ್ತು. ಇವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಈಗ ಸೆಂದಿಲ್ ಕುಮಾರ್ ಮೃತರಾಗಿರುವುದರಿಂದ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಲಿದೆ.

ಇದನ್ನೂ ಓದಿ – ಚಾಕು ಇರಿತದ ಬೆನ್ನಿಗೆ ಹಬ್ಬಿದ ವದಂತಿ, ಶಿವಮೊಗ್ಗ ನಗರದಲ್ಲಿ ಆತಂಕ

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿದವನು ಒಬ್ಬನಲ್ಲ, ಘಟನೆಗೇನು ಕಾರಣ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment