ಶಿವಮೊಗ್ಗದಲ್ಲಿ ತಡರಾತ್ರಿ ಕೊಲೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 ಏಪ್ರಿಲ್ 2022

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಲಾಗಿದೆ. ಶಿವಮೊಗ್ಗ KSRTC ಬಸ್ ನಿಲ್ದಾಣದ ಬಳಿ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಕುಶನ್ ಚಂದು (29) ಮೃತ ದುರ್ದೈವಿ. ಹಳೆ ದ್ವೇಷದ ಹಿನ್ನೆಲೆ ಪರಶುರಾಮ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.  

ಹೇಗಾಯ್ತು ಘಟನೆ?

ಕುಶನ್ ಚಂದು ತನ್ನ ಸ್ನೇಹಿತ ಸತೀಶ್ ಎಂಬಾತನ ಜೊತೆ ರಾತ್ರಿ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದ. ಈ ವೇಳೆ ಪರಶುರಾಮ ಮತ್ತು ಕುಶನ್ ಚಂದು ಸಿಕ್ಕಿದ್ದು, ಜಗಳವಾಗಿದೆ. ಹಳೆ ವೈಷಮ್ಯದ ಹಿನ್ನೆಲೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭ ಕುಶನ್ ಚಂದು ತಲೆ ಮೇಲೆ ಪರಶುರಾಮ ಕಲ್ಲು ಎತ್ತಿ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಚಂದು ಸ್ನೇಹಿತ ಸತೀಶ್ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.

ಯಾರಿದು ಪರಶುರಾಮ?

ಪರಶುರಾಮನು ಮಹಾನಗರ ಪಾಲಿಕೆಯ ಕಸದ ಗಾಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಾಜೀವ್ ಗಾಂಧಿ ಬಡಾವಣೆಯ ನಿವಾಸಿಯಾಗಿರುವ ಪರಶುರಾಮ ಮತ್ತು ಕುಶನ್ ಚಂದು ಮಧ್ಯೆ ಕೆಲವು ವಿಚಾರಗಳಿಗೆ ದ್ವೇಷ ಬೆಳೆದಿತ್ತು. ಇದೆ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment