SHIVAMOGGA LIVE NEWS | MURDER PLAN | 26 ಏಪ್ರಿಲ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ವಿಚಾರಣೆ ನಡೆಸಿದಾಗ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಪೊಲೀಸರ ಮುನ್ನೆಚ್ಚರಿಕೆ ಶಿವಮೊಗ್ಗದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿಸಿದೆ.
ಏನಿದು ಪ್ರಕರಣ?
ಶಿವಮೊಗ್ಗದ ಮೆಹಬೂಬ್ ನಗರದ ಸಲ್ಮಾನ್, ಅರ್ಬಾಜ್, ಉಸ್ಮಾನ್ ಬಂಧಿತರು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು.
‘ಸಂಜೆಯೊಳಗೆ ಸಾಯಿಸುತ್ತೇವೆ’
ಇತ್ತೀಚೆಗೆ ನ್ಯೂ ಮಂಡ್ಲಿ ಬಳಿ ಬೈಕ್’ನಲ್ಲಿ ತೆರಳುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬನ ಸಹೋದರನನ್ನು ಆರೋಪಿಗಳು ಅಡ್ಡಗಟ್ಟಿದ್ದರು. ಮಾರಕಾಸ್ತ್ರಗಳನ್ನು ತೋರಿಸಿ ನಿನ್ನ ಸಹೋದರ ಎಲ್ಲಿದ್ದಾನೆ? ಸಂಜೆಯೊಳಗೆ ಆತನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಕರ್ತನ ಮೇಲೆ ನಿಗಾ ವಹಿಸಿದ್ದರು
ಆರೋಪಿಗಳು ಹಿಂದೂ ಸಂಘಟನೆಯ ಕಾರ್ಯಕರ್ತನ ಚಲನವಲನದ ಮೇಲೆ ನಿಗಾ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಬೈಪಾಸ್ ರಸ್ತೆಯ ಸೇತುವೆ ಬಳಿ ಇವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಇವರನ್ನು ಬಂಧಿಸಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.
ಹೆಚ್ಚಿನ ವಿಚಾರಣೆ ನಡೆಸಿದಾಗ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಮೂವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಬ್ಬ ಯುವಕನ ಹತ್ಯೆಗೆ ಸಂಚು, ಪೊಲೀಸರ ಕಾರ್ಯಾಚರಣೆಯಿಂದ ತಪ್ಪಿತು ಅನಾಹುತ
MURDER PLAN
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






