SHIVAMOGGA LIVE NEWS | 11 ಮಾರ್ಚ್ 2022
ಶಿವಮೊಗ್ಗದಲ್ಲಿ ಮತ್ತೊಮ್ಮೆ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಮೂರು ದಿನದ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಚಾಲನೆ ನೀಡಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ, ಮಾರಾಟ ಆಯೋಜಿಸಲಾಗಿದೆ. ಮಹಿಳೆಯರ ಮನ ಸೆಳೆಯುವ ಸುಮಾರು 400ಕ್ಕೂ ಹೆಚ್ಚು ಡಿಸೈನ್ ಸೀರೆಗಳು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಳೆದ ಭಾರಿ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ, ಮಾರಾಟಕ್ಕೆ ಉತ್ತಮ ಸ್ಪಂದನೆ ಸಿಕ್ಕಿತ್ತು. ಈ ಭಾರಿ ಮೊದಲ ದಿನವೇ ಹೆಚ್ಚಿನ ಸಂಖ್ಯೆಯ ಮಹಿಳೆಯರು ಭೇಟಿ ನೀಡಿ, ಸೀರೆಗಳನ್ನು ಖರೀದಿಸಿದ್ದಾರೆ.
ಜಗತ್ತಿನಾದ್ಯಂತ ಜನ ಮನ್ನಣೆ
ಮೈಸೂರು ಸಿಲ್ಕ್ಸ್ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮಾತನಾಡಿ, ಮೈಸೂರು ಸಿಲ್ಕ್ಸ್ ರೇಷ್ಮೆ ಸೀರೆಗಳಿಗೆ ಜಗತ್ತಿನಾದ್ಯಂತ ಮನ್ನಣೆ ಇದೆ. ನಾಡಿನ ಶ್ರೀಮಂತಿಕೆಯ ಪ್ರತೀಕವಾಗಿದೆ. ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುವಲ್ಲಿ ಸಂಸ್ಥೆ ಸಮರ್ಥವಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕ ಜಿ.ಪಿ.ವಿಜಯಕುಮಾರ್, ಕೆ.ಎಸ್.ಐ.ಸಿ ಮಾರಾಟ ವಿಭಾಗದ ಪ್ರಧಾನ ವ್ಯವಸ್ಥಾಪಕ ಎಸ್.ಭಾನುಪ್ರಕಾಶ್ ಸೇರಿ ಹಲವರು ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200