ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 AUGUST 2023
SHIMOGA : ಶ್ರಾವಣ (Shravana) ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು (Nagara Panchami) ಶಿವಮೊಗ್ಗ ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಭಕ್ತರು ನಾಗ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆ ಬೇಡುತ್ತಿದ್ದಾರೆ.
ಶಿವಮೊಗ್ಗದ ರವೀಂದ್ರ ನಗರ (Ravindra Nagara) ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ನಾಗದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ನಾಗರಕಲ್ಲಿಗೆ ಹಾಲು ಎರೆದು, ನೈವೇದ್ಯ ಮಾಡಿ ಪೂಜೆ ಸಲ್ಲಿಸುತ್ತಿದಾರೆ. ಗೋಪಾಳದ (Gopala) ನಾಗ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರೆ.
ಇದನ್ನೂ ಓದಿ – ಶಿವಮೊಗ್ಗ ATNC ಕಾಲೇಜಿನಲ್ಲಿ ಟ್ರೆಡಿಷನಲ್ ಡೇ, ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್, ಉಪನ್ಯಾಸಕರಿಂದ ರಾಂಪ್ ವಾಕ್
ಹುತ್ತಗಳ ಬಳಿ ಜನ ಸಂದಣಿ
ಇನ್ನೊಂದೆಡೆ ಹುತ್ತಗಳ ಬಳಿಯು ಬೆಳಗ್ಗೆಯಿಂದ ಪೂಜೆ ನಡೆಸಲಾಗುತ್ತಿದೆ. ಹುತ್ತಕ್ಕೆ ಅರಿಶಿಣ, ಕುಂಕುಮ ಹಾಕಿ, ಹಾಲೆರೆದು, ಪೂಜೆ ಸಲ್ಲಿಸಲಾಗುತ್ತಿದೆ. ಸೊರಬದ ಕಾನುಕೇರಿಯ ಅಶ್ವತ್ಥ ಮರದ ಕೆಳಗಿರುವ ನಾಗರ ಮೂರ್ತಿಗೆ ಮಹಿಳೆಯರು ಹಾಲೆರೆದರು.
ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಇರುವ ನಾಗರ ಮೂರ್ತಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರಂಗನಾಥ ದೇವಸ್ಥಾನದ ಆವರಣ, ಹಿರೇಶಕುನದ ಅರಳಿ ಮರದ ಸಮೀಪದಲ್ಲಿರುವ ನಾಗರ ಮೂರ್ತಿಗೂ ಪೂಜೆ ನಡೆಯಿತು.
ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಂದ ನಾಗದೇವರ ಪೂಜೆ ಸಲ್ಲಿಸಲಾಗುತ್ತಿದೆ. ಕುಟುಂಬ ಸಹಿತ ಜನರು ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422