ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 OCTOBER 2024 : ನಗರಸಭೆ ಮಾಜಿ ಅಧ್ಯಕ್ಷ (Former President), ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಮತ್ತು ಬಿಜೆಪಿ ನಾಯಕ ಎನ್.ಜೆ.ರಾಜಶೇಖರ್ (72) (ಸುಭಾಷ್) ನಿಧನರಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅನಾರೋಗ್ಯದ ಹಿನ್ನೆಲೆ ಎನ್.ಜೆ.ರಾಜಶೇಖರ್ ಅವರು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್ ಅವರು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮಗಳು, ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಇನ್ನು, ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.
ಇದನ್ನೂ ಓದಿ » ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ
ಮೃತರಿಗೆ ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರನ್ನು ಇದ್ದಾರೆ. ಅ.28ರಂದು ಮತ್ತೋಡಿನ ಮೃತರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.