ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್ ಅವರು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಟಿಲ್ ಅವರು ಇಂದು ಸಂಜೆಯೇ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಪ್ರಮುಖರ ಜೊತೆ ಮಾತನಾಡಲಿದ್ದಾರೆ. ನಾಳೆ ಬೆಳಿಗ್ಗೆ 8.30ಕ್ಕೆ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ 10.30ಕ್ಕೆ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ ಎಂದರು.
ನಾಳೆ ಬೆಳಿಗ್ಗೆ ನಡೆಯಲಿರುವ ಜಿಲ್ಲಾ ಕಾರ್ಯಕರ್ತರ ಸಮಾವೇಶದಲ್ಲಿ ಮುಖಂಡರು, ಜಿಲ್ಲೆಯ ಎಲ್ಲ ಶಕ್ತಿ ಹಾಗೂ ಮಂಡಲದ ಪ್ರಮುಖರು, ಸ್ಥಳೀಯ ಸಂಸ್ಥೆ ಸದಸ್ಯರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸುಮಾರು ಒಂದುವರೆ ಸಾವಿರ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 1.30ರವರೆಗೆ ಸಭೆ ನಡೆಯಲಿದೆ. ಆನಂತರ ಮತ್ತೊಂದು ಮಂಡಲದ ಸಭೆ ನಡೆಯಲಿದ್ದು, ನಂತರ ಅವರು ಮಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ಎನ್.ಚನ್ನಬಸಪ್ಪ, ಎನ್.ಜೆ.ರಾಜಶೇಖರ್, ಗಿರೀಶ್ ಪಟೇಲ್, ಶಂಕರ್, ಕೆ.ಜಿ.ಕುಮಾರಸ್ವಾಮಿ, ಅನಿತಾ ರವಿಶಂಕರ್, ರುದ್ರೇಶ್, ರತ್ನಾಕರ ಶೆಣೈ, ಮಧುಸೂದನ್, ಕೆ.ವಿ.ಅಣ್ಣಪ್ಪ ಮುಂತಾದವರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
BJP State President Nalin Kumar Katil to visit Shimoga says District President Rudregowda. Nalin Kumar Katil to hold various meetings in Shimoga