ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021
ಕಿಡ್ನಿ ದಿನಾಚರಣೆ ಅಂಗವಾಗಿ ನಂಜಪ್ಪ ಆಸ್ಪತ್ರೆ ವತಿಯಿಂದ ಎಸ್.ಕೆ.ಟ್ರ್ಯಾಕ್ ಅಂಡ್ ಫೀಲ್ಡ್ ಸಂಸ್ಥೆ ಸಹಯೋಗದಲ್ಲಿ, ಶಿವಮೊಗ್ಗದಲ್ಲಿ ನಂಜಪ್ಪ 3ಕೆ ರನ್ ಆಯೋಜಿಸಲಾಗಿದೆ. ಮಾರ್ಚ್ 15ರಂದು ಶಿವಮೊಗ್ಗದಲ್ಲಿ ಮ್ಯಾರಥಾನ್ ನಡೆಯಲಿದೆ.
ಬೆಳಗ್ಗೆ 7ಕ್ಕೆ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗ ‘ನಂಜಪ್ಪ 3ಕೆ ರನ್’ ಆರಂಭವಾಗಲಿದೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9ಕ್ಕೆ ‘ನಂಜಪ್ಪ 3ಕೆ ರನ್’ ಮುಕ್ತಾಯವಾಗಲಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ನಂಜಪ್ಪ ಅಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಸೇರಿದಂತೆ ಸುಮಾರು 200 ಮಂದಿ ಮ್ಯಾರಥಾನ್ನಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ನಂಜಪ್ಪ ಆಸ್ಪತ್ರೆ ಆವರಣದಲ್ಲಿ ಕಿಡ್ನಿಯ ಆರೋಗ್ಯ, ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






