ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MARCH 2024
SHIMOGA : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಮೊಬೈಲ್‌ನಲ್ಲಿ ಮೋದಿ ವಿಡಿಯೋ ಚಿತ್ರೀಕರಿಸಿಕೊಂಡು ಸಂಭ್ರಮಿಸಿದರು.

ಎಲ್ಲೆಲ್ಲಿ ಹೇಗೆ ಸೇರಿದ್ದರು ಜನರು?
ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ಕಾರಿನಲ್ಲಿ ಆಗಮಿಸಿದರು. ಅವರು ಸಾಗುವ ಮಾರ್ಗದುದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಜನ ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರು ಆಗಮಿಸುತ್ತಿದ್ದಂತೆ ಜನರು ಘೋಷಣೆ ಕೂಗಿದರು. ಪ್ರಧಾನಿ ಮೋದಿಯತ್ತ ಕೈ ಬೀಸಿದರು. ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ಜನರತ್ತ ಕೈ ಬೀಸಿದರು.
ಜನರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ಇನ್ನು, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರೂ ಕೆಲವು ಕಡೆ ಜನರು ಬ್ಯಾರಿಕೇಡ್‌ನಿಂದ ಹೊರ ಬಂದು ನಿಂತಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಪದೇ ಪದೆ ಮೈಕ್‌ನಲ್ಲಿ ಕೂಗುತ್ತಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೆ ಜನರ ನಿಯಂತ್ರಿಸುತ್ತಿದ್ದರು.





ಇದನ್ನೂ ಓದಿ – ಟೆಂಪಲ್ ರನ್ ಬಳಿಕ ಸಾಲು ಸಾಲು ಮಠಗಳಿಗೆ ಈಶ್ವರಪ್ಪ ಭೇಟಿ, ಶ್ರೀಗಳ ಜೊತೆ ಚರ್ಚೆ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















