ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 NOVEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ವಿಶ್ವನಾಯಕ (World Leader). ಜಾಗತಿಕ ಸುಳ್ಳಿನ ಸ್ಪರ್ಧೆ ನಡೆಸಿದರೆ ಪ್ರಧಾನಿ ನರೇಂದ್ರ ಮೋದಿಗೆ ಪ್ರಥಮ, ಅಮಿತ್ ಷಾ ಅವರಿಗೆ ದ್ವಿತೀಯ ಸ್ಥಾನ ದೊರೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ವ್ಯಂಗ್ಯವಾಡಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಬಿಜೆಪಿಯವರು ಸುಳ್ಳನ್ನಷ್ಟೆ ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಹಿಂದೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಹಾಗಿದ್ದೂ ಬಿಜೆಪಿ ಮುಖಂಡರು ನಮ್ಮ ಸರ್ಕಾರದ ವಿರುದ್ಧ ಅವಹೇಳನ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹೈಕಮಾಂಡ್ ಬುಲಾವ್ ನೆಪದಲ್ಲಿ ದೆಹಲಿಗೆ
ಆರು ತಿಂಗಳಾದರು ಬಿಜೆಪಿಯವರು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ವಿಫಲವಾಗಿದ್ದಾರೆ. ಬಿಜೆಪಿಯಲ್ಲಿ ಹಲವು ಗುಂಪುಗಳಿರುವುದು ಇದಕ್ಕೆ ಕಾರಣ. ಯಡಿಯೂರಪ್ಪ ಅವರನ್ನು ಈತನಕ ನಿರ್ಲಕ್ಷ್ಯ ಮಾಡಲಾಗಿತ್ತು. ಈಗ ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹೈ ಕಮಾಂಡ್ ಬುಲಾವ್ ನೆಪದಲ್ಲಿ ಬಿಜೆಪಿ ಮುಖಂಡರು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದಾಗಿದೆ. ಈಶ್ವರಪ್ಪ ಅವರು ದೆಹಲಿಗೆ ತೆರಳಿದ್ದು ಮುಖಂಡರಿಗೆ ಮನವಿ ಸಲ್ಲಿಸುವಂತೆ ನಿಂತಿದ್ದಾರೆ ಫೋಟೊ ಹೊರ ಬಂದಿದೆ ಎಂದರು.
ಬಿಜೆಪಿ ಸರ್ಕಾರವಿದ್ದಾಗಲೆ ಪರಿಹಾರ ತರಲಿಲ್ಲ
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಖಜಾನೆ ಲೂಟಿ ಮಾಡಿದ್ದಾರೆ. ನಿಗದಿಗಿಂತಲೂ ಹೆಚ್ಚಿನ ಮೊತ್ತದ ಟೆಂಡರ್ ಕರೆದು ಹಣ ಖಾಲಿ ಮಾಡಿದ್ದಾರೆ. ಈಗ ಬರ ಪರಿಹಾರದ ಕುರಿತು ಸರ್ಕಾರದ ವಿರುದ್ಧ ಟೀಕಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗಲೆ ಕೇಂದ್ರದಿಂದ ಬರ ಪರಿಹಾರ ತರುವಲ್ಲಿ ವಿಫಲವಾಗಿದ್ದರು. ಈಗ ಯಡಿಯೂರಪ್ಪ ಅವರು ಬರ ಅಧ್ಯಯನ ಪ್ರವಾಸ ಮಾಡುವುದಾಗಿ ತಿಳಿಸುತ್ತಿದ್ದಾರೆ ಎಂದು ಸುಂದರೇಶ್ ಟೀಕಿಸಿದರು.
ದೀಪಾವಳಿ ಬಳಿಕ ಸಂಸತ್ಗೆ ಸಿದ್ಧತೆ
ದೀಪಾವಳ ಹಬ್ಬದ ನಂತರ ಲೋಕಸಭೆ ಚನಾವಣೆಗೆ ಸಿದ್ಧತೆ ಆರಂಭಿಸಲಾಗುತ್ತದೆ. ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗುತ್ತದೆ. ವಿಧಾನಸಭೆ ಕ್ಷೇತ್ರವಾರು ಕಾರ್ಯಕರ್ತರ ಸಭೆ ಆಯೋಜಿಲಾಗುತ್ತದೆ. ಪಕ್ಷದಲ್ಲಿ ತಮ್ಮನ್ನು ಸೇರಿದಂತೆ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ನೀಡಿದರು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ತಿಳಿಸಿದರು.
ಇದನ್ನೂ ಓದಿ – ವಿದೇಶದಲ್ಲಿ ಉನ್ನತ ಶಿಕ್ಷಣ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರು ಅರ್ಜಿ ಸಲ್ಲಿಸಬಹುದು?