ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭೀಕರ ಮಧ್ಯೆ, ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ಕಣ್ತುಂಬಿಕೊಂಡು ಪುಳಕಿತರಾದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದಲ್ಲಿ ನಡೆದ ಸಮಾವೇಶದಲ್ಲಿ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಂಡಾಲ್ನಲ್ಲಿ ಜನರ ಮಧ್ಯೆ ಮೆರವಣಿಗೆ ಮಾಡಿದರು. ತೆರೆದ ಜೀಪ್ನಲ್ಲಿ ಮೋದಿ ಅವರು ಸಭೀಕರತ್ತ ಕೈ ಮುಗಿದು, ಕೈ ಬೀಸುತ್ತ ಸಾಗಿದರು. ಜನರು ಪ್ರಧಾನಿ ಮೋದಿ ಅವರತ್ತ ಕೈ ಬೀಸಿ, ಘೋಷಣೆ ಕೂಗಿದರು. ತಮ್ಮ ಮೊಬೈಲ್ಗಳಲ್ಲಿ ಮೋದಿ ಅವರ ಭಾವಚಿತ್ರ ತೆಗೆದುಕೊಂಡು ಖುಷಿಪಟ್ಟರು.
ಸಂಸದ ಬಿ.ವೈ.ರಾಘವೇಂದ್ರ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಮೋದಿ ಅವರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ನೋಡಲು ಜನವೋ ಜನ, ನಿಯಂತ್ರಣಕ್ಕೆ ಪೊಲೀಸರ ಹರಸಾಹಸ