ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 2 OCTOBER 2024 : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.3ರಿಂದ 11ರವರೆಗೆ 16ನೇ ವರ್ಷದ ಶರನ್ನವರಾತ್ರಿ (Navaratri) ಉತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಸಂದೇಶ ಉಪಾಧ್ಯ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅ.3ರಂದು ಸಂಜೆ 6ಕ್ಕೆ ಕರ್ನಾಟಕ ಕಲಾಶ್ರೀ ಪುರಸ್ಕೃತೆ ಪುಷ್ಪಾ ಕೃಷ್ಣಮೂರ್ತಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ರಾಮಲಿಂಗಪ್ಪ ಅಧ್ಯಕ್ಷತೆ ವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏನೆಲ್ಲ ಪೂಜೆ, ಕಾರ್ಯಕ್ರಮ ಇರಲಿದೆ?
ಈ ಬಾರಿ ದೇವಿಯ 9ನೇ ಅವತಾರ ಚಾಮುಂಡದೇವಿ ವಿಗ್ರಹವನ್ನು ಖ್ಯಾತ ಶಿಲ್ಪಿ ಪ್ರವೀಣ್ ಕವೇಕರ್ ನಿರ್ಮಿಸಿದ್ದಾರೆ. ಪ್ರತಿದಿನ ಬೆಳಗ್ಗೆ ಚಂಡಿಕಾ ಯಾಗದೊಂದಿಗೆ ಕಾರ್ಯಕ್ರಮ ಆರಂಭವಾಗಿ ಮಧ್ಯಾಹ್ನ 12.30ಕ್ಕೆ ಮಂಗಳಾರತಿಯೊಂದಿಗೆ ಮುಗಿಯತ್ತದೆ. ಪ್ರತಿದಿನ ಸಂಜೆ 5 ಗಂಟೆಯಿಂದ ರಿಂದ ರಾತ್ರಿ 8 ಗಂಟೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಭರತನಾಟ್ಯ, ಗಾನ ನೃತ್ಯಾಮೃತ, ಸಂಗೀತ, ಭಕ್ತಿಗೀತೆ, ದೇವಿ ಕೃತಿಗಳ ಗಾಯನ, ನಾಟಕ, ಯಕ್ಷಗಾನ ಮುಂತಾದ ಕಾರ್ಯಕ್ರಮಗಳಿವೆ. ಪ್ರತಿದಿನ ನಗರದ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸೌಂದರ್ಯ ಲಹರಿ, ಲಲಿತಾ ಸಹಸ್ರನಾಮ ಪಠಣವಿರುತ್ತದೆ ಸಂದೇಶ್ ಉಪಾಧ್ಯ ಎಂದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ರಾಮಲಿಂಗಪ್ಪ, ಕಾರ್ಯದರ್ಶಿ ಕೆ.ಎ.ರಮೇಶ್, ಮಾಜಿ ಅಧ್ಯಕ್ಷ ಜಿ.ಹೆಚ್.ಮಂಜುನಾಥ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ಹಾಲು ಉತ್ಪಾದಕರಿಗೆ ಶಾಕ್ ನೀಡಿದ ಶಿಮುಲ್, ಖರೀದಿ ದರ ಕಡಿತ