ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020
ಶಿವಮೊಗ್ಗ ನಗರದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ದೇವಸ್ಥಾನವೊಂದರಲ್ಲಿ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನವುಲೆಯ ಸಂಕಟ ವಿಮೋಚನ ಶ್ರೀ ಶನೈಶ್ಚರ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 26ರಿಂದ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ ಎಂದು ದೇವಸ್ಥಾನದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ವೈರಸನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನಕ್ಕೆ ಭಕ್ತರು ಹೆಚ್ಚಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ದರ್ಶನವನ್ನು ನಿರ್ಬಂಧಿಸಲಾಗಿದೆ. ಆದರೆ ದೇವಸ್ಥಾನದಲ್ಲಿ ನಿತ್ಯ ಪೂಜಾ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ವ್ಯವಸ್ಥಾಪಕರು, ಪ್ರಧಾನ ಅರ್ಚಕರು ಹಾಗೂ ದೈನಂದಿನ ಕಾರ್ಯಗಳನ್ನು ಮಾಡುವವರಿಗೆ ದೇವಸ್ಥಾನದೊಳಗೆ ಪ್ರವೇಶ ಇರಲಿದೆ.
ಕೊರೋನಾ ವೈರಸ್ ತಹಬಂದಿಗೆ ಬರುವವರೆಗೆ ಈ ನಿರ್ಬಂಧ ಮುಂದುವರೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಅವರು ಕೋರಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]