ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಎನ್‌ಸಿಸಿ ಕ್ಯಾಂಪ್‌ನಲ್ಲಿ (NCC) ಆಹಾರ ಸೇವಿಸಿದ 9 ಕೆಡೆಟ್‌ಗಳು ಅಸ್ವಸ್ಥಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಎನ್‌ಸಿಸಿ ಕ್ಯಾಂಪ್ ನಡೆಯುತ್ತಿದೆ. ಇವತ್ತು ಬೆಳಗ್ಗೆ ಆಹಾರ ಸೇವಿಸಿದ್ದ ಬಳಿಕ ಇಬ್ಬರು ಕೆಡೆಟ್‌ಗಳು ವಾಂತಿ ಮಾಡಿಕೊಂಡಿದ್ದಾರೆ. ಇವರನ್ನು ಗಮನಿಸಿ ಉಳಿದ 7 ಮಂದಿಗೆ ವಾಂತಿಯಾಗಿದೆ ಎನ್ನಲಾಗಿದೆ. ಅಸ್ವಸ್ಥರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಎಲ್ಲರು ಚೇತರಿಸಿಕೊಂಡಿದ್ದಾರೆ.
ಶಿವಮೊಗ್ಗ ಮತ್ತು ಹೊರ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು 400 ಕಡೆಟ್‌ಗಳು ಎನ್‌ಸಿಸಿ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದಾರೆ.
ಇದನ್ನೂ ಓದಿ – ‘ಪೆಟ್ರೋಲ್, ಡಿಸೇಲ್ ದರ ಹೆಚ್ಚಳಕ್ಕೆ ರಾಜಕೀಯ ದ್ವೇಷವೆ ಕಾರಣ’, ಶಿವಮೊಗ್ಗದಲ್ಲಿ ನಾಳೆ ತಮಟೆ ಹೋರಾಟ