ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | RESCUE| 19 ಮೇ 2022
ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದಿಂದ ಸ್ವಲ್ಪ ಬಿಡುವು ನೀಡಿದ್ದ ವರುಣ ಸಂಜೆ ನಂತರ ಪುನಃ ಆರ್ಭಟಿಸುತ್ತಿದ್ದಾನೆ. ಇದರಿಂದ ತಗ್ಗು ಪ್ರದೇಶದ ಜನರಲ್ಲಿ ಪುನಃ ಭಯ ಶುರುವಾಗಿದೆ. ವಿದ್ಯಾನಗರದ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿದ್ಯಾನಗರದ 13ನೇ ಅಡ್ಡರಸ್ತೆಯಲ್ಲಿ ಕೆಲ ಮನೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವರ ರಕ್ಷಣೆ ಮಾಡಿದ್ದಾರೆ. ನವಜಾತ ಶಿಶು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ನಾಲ್ಕು ತಿಂಗಳ ನವಜಾತ ಶಿಶು, ತಾಯಿ ನಾಗವೇಣಿ ಅವರನ್ನು ರಕ್ಷಣೆ ಮಾಡಲಾಗಿದೆ. ಕಿರಣ್, ಭಾಗ್ಯಮ್ಮ ಮತ್ತು ದೀಕ್ಷಾ ಎಂಬುವವರನ್ನು ಕೂಡ ರಕ್ಷಣೆ ಮಾಡಲಾಗಿದೆ. ಇವರ ಮನೆಗಳಲ್ಲಿ ಸಮಾರು 5 ಅಡಿಯಷ್ಟು ನೀರು ನಿಂತಿದೆ.
ಇದನ್ನೂ ಓದಿ – ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422