ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ದುರ್ಗಿಗುಡಿಯ ಎಲ್‌ಎಲ್‌ಆರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ (Bank) ಶಾಖಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಆ.25ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಬ್ಯಾಂಕ್‌ನ ಅಧ್ಯಕ್ಷ ಜಿ. ರಾಜು ತಿಳಿಸಿದರು. ಎಂದು
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ರಾಜು, ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಲಾಕರ್ ಗಳನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೌಂಟರ್‌ಗಳನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ ಎಂದರು. ಸ್ಟ್ರಾಂಗ್ ರೂಮ್‌ನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಅಧ್ಯಕ್ಷರ ಕೊಠಡಿಯನ್ನು ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಅಧ್ಯಕ್ಷಜಿ.ರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?
ಬ್ಯಾಂಕ್‌ನ ಉಪಾಧ್ಯಕ್ಷೆ ಜಿ.ಎಚ್.ಪ್ರೇಮ, ಪ್ರಮುಖರಾದ ಬಿ.ಲೋಕೇಶ್, ಕೆ.ರಂಗನಾಥ್, ಎಸ್.ಪಿ. ಶೇಷಾದ್ರಿ, ಹೊನ್ನಪ್ಪ, ಚಂದ್ರಶೇಖರ್, ಪ್ರಸನ್ನ ಕುಮಾರ್ ಮತ್ತಿತರರಿದ್ದರು.
City Cooperative Bank new branch in Shimoga city
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





