ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್ ನಂಬರ್ 7411700200.
NEWS HIGHLIGHTS
ಶಿವಮೊಗ್ಗ: ನಗರದ ದುರ್ಗಿಗುಡಿಯ ಎಲ್‌ಎಲ್‌ಆರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನ (Bank) ಶಾಖಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಆ.25ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಬ್ಯಾಂಕ್‌ನ ಅಧ್ಯಕ್ಷ ಜಿ. ರಾಜು ತಿಳಿಸಿದರು. ಎಂದು
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ರಾಜು, ಕಟ್ಟಡವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಲಾಕರ್ ಗಳನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೌಂಟರ್‌ಗಳನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ಉದ್ಘಾಟಿಸಲಿದ್ದಾರೆ ಎಂದರು. ಸ್ಟ್ರಾಂಗ್ ರೂಮ್‌ನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಅಧ್ಯಕ್ಷರ ಕೊಠಡಿಯನ್ನು ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ಅಧ್ಯಕ್ಷಜಿ.ರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು?
ಬ್ಯಾಂಕ್‌ನ ಶಾಖಾ ಕಟ್ಟಡ ನಿರ್ಮಾಣಕ್ಕೆ 2.03 ಕೋಟಿ ರೂ. ನೀಡಿ ನಿವೇಶನ ಖರೀದಿಸಲಾಗಿತ್ತು. ಮೂರು ವರ್ಷದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ಮುಂದೆ ಗಾಡಿಕೊಪ್ಪದಲ್ಲಿ ಶಾಖೆ ತೆರೆಯುವ ಯೋಜನೆ ಇದೆ.ಎಸ್.ಕೆ.ಮರಿಯಪ್ಪ, ಬ್ಯಾಂಕ್‌ನ ನಿರ್ದೇಶಕ
ಬ್ಯಾಂಕ್‌ನ ಉಪಾಧ್ಯಕ್ಷೆ ಜಿ.ಎಚ್.ಪ್ರೇಮ, ಪ್ರಮುಖರಾದ ಬಿ.ಲೋಕೇಶ್, ಕೆ.ರಂಗನಾಥ್, ಎಸ್.ಪಿ. ಶೇಷಾದ್ರಿ, ಹೊನ್ನಪ್ಪ, ಚಂದ್ರಶೇಖರ್, ಪ್ರಸನ್ನ ಕುಮಾರ್ ಮತ್ತಿತರರಿದ್ದರು.
City Cooperative Bank new branch in Shimoga city
EDITOR / AUTHOR PROFILE
Published : August 21, 2025 at 10:40 AM IST