ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 DECEMBER 2024
ಶಿವಮೊಗ್ಗ : ಷೇರುದಾರರಿಗೆ ಕಾರ್ಪೊರೇಟ್ ಬ್ಯಾಂಕ್ ಮಾದರಿ ಸೇವೆ ಒದಗಿಸಲು ಸಿದ್ಧವಾಗಿರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (DCC BANK) ಮೂರು ಹೊಸ ಶಾಖೆಗಳನ್ನು ತೆರೆಯುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಡಿ.6ರಂದು ಸೊರಬ ತಾಲೂಕು ಜಡೆ ಗ್ರಾಮದಲ್ಲಿ ಬ್ಯಾಂಕ್ನ ಶಾಖೆ ಆರಂಭಿಸಲಾಗುತ್ತಿದೆ. ಡಿ.12ರಂದು ಶಿಕಾರಿಪುರ ತಾಲೂಕು ಸುಣ್ಣದಕೊಪ್ಪ, ಡಿ.18ರಂದು ಭದ್ರಾವತಿ ತಾಲೂಕು ಕ್ಲಲಿಹಾಳ್ನಲ್ಲಿ ಶಾಖೆ ಆರಂಭಿಸಲಾಗುತ್ತಿದೆ. ಇದರಿಂದ ಡಿಸಿಸಿ ಬ್ಯಾಂಕ್ನ ಒಟ್ಟು ಶಾಖೆಗಳ ಸಂಖ್ಯೆ 31ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದರು.
22 ಹೊಸ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ಗೆ ಅನುಮತಿ ಕೇಳಲಾಗಿದೆ. ಈಗ ಮೂರು ಶಾಖೆಗಳ ಆರಂಭಕ್ಕೆ ಅನುಮತಿ ಸಿಕ್ಕಿದೆ. 2025ರಲ್ಲಿ 19 ಶಾಖೆಗಳ ಆರಂಭಕ್ಕೆ ಅನುಮತಿ ದೊರೆಯುವ ನಿರೀಕ್ಷೆ ಇದೆ.
– ಡಾ. ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಇನ್ನು, ನಬಾರ್ಡ್ ಪುನರ್ಧನ ಸೌಲಭ್ಯ ಕಡಿತಗೊಂಡಿದ್ದರು ಡಿಸಿಸಿ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1.20 ಲಕ್ಷ ರೈತರಿಗೆ 1200 ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ನೀಡುವ ಗುರಿ ಹೊಂದಿದೆ. ಈಗಾಗಲೇ 1,05,640 ರೈತರಿಗೆ 1180.12 ಕೋಟಿ ರೂ. ಸಾಲ ನೀಡಲಾಗಿದೆ. ಶೇ.3ರ ಬಡ್ಡಿ ದರದಲ್ಲಿ 845 ರೈತರಿಗೆ 64.12 ಕೋಟಿ ರೂ. ಮಧ್ಯಮಾವಧಿ ಕೃಷಿ ಸಾಲ ನೀಡಲಾಗಿದೆ ಎಂದರು.
3255 ಸ್ವ ಸಹಾಯ ಸಂಘಗಳಿಗೆ 84.49 ಕೋಟಿ ರೂ. ಸಾಲ ವಿತರಿಸಲಾಗಿದೆ. ಪಶು ಸಂಗೋಪನೆಗಾಗಿ 3050 ಸದಸ್ಯರಿಗೆ 6.63 ಕೋಟಿ ರೂ. ಸಾಲ ನೀಡಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕರಾದ ಮಹಾಲಿಂಗಶಾಸ್ತ್ರಿ, ಸುದೀರ್, ದುಗ್ಗಪ್ಪಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422