ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019
ಸಿಮ್ಸ್ ನೂತನ ಆಡಳಿತಾಧಿಕಾರಿಯಾಗಿ ಎಚ್.ಶಿವಕುಮಾರ್ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಅವರನ್ನು ಸ್ವಾಗತಿಸಿದರು.
ಸಂಘದ ಜಿಲ್ಲಾಧ್ಯಕ್ಷ ಮ.ಸ.ನಂಜುಂಡಸ್ವಾಮಿ ಮಾತನಾಡಿ, ಕಾಲೇಜಿನ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ನಿರ್ದೇಶಕರು ಒಟ್ಟಾಗಿ ಸಮರ್ಥ ಯೋಜನೆಗಳನ್ನು ರೂಪಿಸುವ ಮೂಲಕ ಮಲೆನಾಡು ಪ್ರಾಂತ್ಯದ ಸಾಮಾನ್ಯ ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ ಸಿಗುವಂತೆ ಆಡಳಿತ ನಡೆಸಬೇಕೆಂದು ಹೇಳಿದರು.
ಹೆಚ್.ಶಿವಕುಮಾರ್ ಮಾತನಾಡಿ, ನೌಕರರ ಯಾವುದೇ ಸಮಸ್ಯೆಗಳಿದ್ದಲ್ಲಿ ಅದನ್ನು ತಮ್ಮ ಗಮನಕ್ಕೆ ತಂದರೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐ.ಪಿ.ಶಾಂತರಾಜ್, ಜಿಲ್ಲಾ ಸರ್ಕಾರಿ ಫಾರ್ಮಸಿಸ್ ಸಂಘದ ಅಧ್ಯಕ್ಷ ವಿ. ಪ್ರಭಾಕರ್, ಜಂಟಿ ಕಾರ್ಯದರ್ಶಿ ಲಕ್ಷ್ಮಣ್, ಚಂದ್ರಮತಿ ಹೆಗಡೆ, ಬಸವರಾಜ್, ನಿಂಗರಾಜ್ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200