ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022
ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಸಚಿವ ಡಾ.ನಾರಾಯಣಗೌಡ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಅದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದು ಪಕ್ಷದ ಮುಖಂಡರಲ್ಲಿ ಚರ್ಚೆಗೆ ಕಾರಣವಾಗಿದೆ.
ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಅಲ್ಲದೆ ಜಿಲ್ಲೆಯ ಅಭಿವೃದ್ಧಿ ಕುರಿತು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು.
ಉಸ್ತುವಾರಿಯಾದ ಬಳಿಕ ಜಿಲ್ಲೆಗೆ ಭೇಟಿ
ಇನ್ನು, ಸಚಿವ ಡಾ.ನಾರಾಯಣಗೌಡ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ದೊರೆತ ಮೇಲೆ ಇದು ಅವರ ಮೊದಲ ಭೇಟಿಯಗಿದೆ. ಇವತ್ತು ರಾತ್ರಿ 8 ಗಂಟೆ ಹೊತ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಶಿವಮೊಗ್ಗಕ್ಕೆ ತಲುಪಲಿದ್ದಾರೆ.
ಜ.26ರಂದು ಡಿಎಆರ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200