ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಎರಡು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು (Indira Canteens) ಇಂದಿನಿಂದ ಕಾರ್ಯಾರಂಭ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದರು.
ವಿದ್ಯಾನಗರ ಮತ್ತು ಗೋಪಾಳದ 17ನೇ ವಾರ್ಡ್‌ನಲ್ಲಿ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಲಾಯಿತು.
ಮಿನಿಸ್ಟರ್ ಏನಂದ್ರು?
ಇದೇ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮತ್ತು ಬಡವರಿಗೆ ಕೈಗೆಟುಕುವ ದರದಲ್ಲಿ ಸಮತೋಲಿತ ಆಹಾರ ಒದಗಿಸುವ ಉದ್ದೇಶದಿಂದ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 12 ಇಂದಿರಾ ಕ್ಯಾಂಟೀನ್‌ಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಿವೆ. ಮುಂದಿನ ದಿನಗಳಲ್ಲಿ ಹೊಳೆಹೊನ್ನೂರು, ಶಿಕಾರಿಪುರ ಮತ್ತು ಆನವಟ್ಟಿ ಕೇಂದ್ರಗಳಲ್ಲಿಯೂ ಶೀಘ್ರವಾಗಿ ಕ್ಯಾಂಟೀನ್ ಆರಂಭಿಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಜನರ ಬೇಡಿಕೆಗೆ ಅನುಗುಣವಾಗಿ ನೂತನ ಕ್ಯಾಂಟೀನ್‌ಗಳ ಸ್ಥಾಪನೆಗೆ ಹೆಚ್ಚಿನ ಮಂಜೂರಾತಿ ನೀಡಲಾಗುತ್ತಿದೆ ಎಂದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕುಸಿದು ಬಿದ್ದು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಮುಖಂಡರಾದ ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ ಮತ್ತಿತರರು ಇದ್ದರು.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





