ಸಾಗರದ ಇರುವಕ್ಕಿ ಕೃಷಿ, ತೋಟಗಾರಿಕೆ ವಿವಿಗೆ ಹೊಸ ಹೆಸರು, ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021

ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಬೆಂಗಳೂರಿನಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ ಶಿವಮೊಗ್ಗದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ, ಸಮಗ್ರ ಮತ್ತು ವಿಶಿಷ್ಟ ವಿಶ್ವವಿದ್ಯಾಲಯವಾಗಿದೆ. 155 ಕೋಟಿ ರೂ. ವೆಚ್ಚದಲ್ಲಿ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವಿಶ್ವವಿದ್ಯಾಲಯಕ್ಕೆ 787 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

240721 IruvakkI Agriculture University Campus 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment