ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಆಗ್ರಹಿಸಿದೆ. (ANUBHAVA MANATAPA)
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಶಿವಮೊಗ್ಗ ತಾಲೂಕು ಅಧ್ಯಕ್ಷ ಬಿ.ಜಿ. ದೇವರಾಜ್, ವಿಶ್ವದಲ್ಲಿ ಮೊಟ್ಟಮೊದಲು ಸಂಸತ್ ಪರಿಕಲ್ಪನೆ ಕೊಟ್ಟಿದ್ದು ಬಸವಣ್ಣನವರ ಅನುಭವ ಮಂಟಪ. ಈಗ ಕೇಂದ್ರ ಸರ್ಕಾರ ದೆಹಲಿಯಲ್ಲಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ ಬಸವಣ್ಣನವರ ನೆನಪಿಗಾಗಿ ಅನುಭವ ಮಂಟಪ ಎಂದು ಹೆಸರಿಡಬೇಕು ಎಂದರು.
(ANUBHAVA MANATAPA)
ವಿಜಯಪುರದಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರರ ಹೆಸರನ್ನು ರಾಜ್ಯ ಸರ್ಕಾರ ಅನುಮೋದಿಸಿದೆ. ಹಾಗೆಯೇ ಕರಾವಳಿ ಭಾಗದ ದೈವನರ್ತನ ಕಲಾವಿದರಿಗೆ 2000 ಮಾಸಾಶನ ಘೋಷಿಸಿರುವುದು ಕೂಡ ಅಭಿನಂದನೀಯ. ಹಾಗೆಯೆ ರಾಜ್ಯದ ಅನೇಕ ಬಡ ಕಲಾವಿದರಿಗು ಮಾಸಾಶನ ನೀಡಬೇಕು. ಅದರಲ್ಲೂ ವೀರಶೈವ ಸಮಾಜದ ಪೌರಾಣಿಕ , ಐತಿಹಾಸಿಕ ಹಿನ್ನೆಲೆಯುಳ್ಳ ವೀರಗಾಸೆ ಕಲಾವಿದರ ಬದುಕು ದುಸ್ತರವಾಗಿದೆ. ಸರ್ಕಾರ ಇವರಿಗೂ ಕೂಡ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಸೂರ್ಯ ಗ್ರಹಣ, ಸಿಗಂದೂರು ಭಕ್ತರಿಗೆ ಮಹತ್ವದ ಸೂಚನೆ, ಉಳಿದ ದೇವಸ್ಥಾನಗಳಲ್ಲಿ ಹೇಗಿರುತ್ತೆ ಪರಿಸ್ಥಿತಿ?
ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಹೆಸರಿಡಬೇಕೆಂದು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಒಪ್ಪಿಗೆ ಸಿಗುವ ವಿಶ್ವಾಸವಿದೆ ಎಂದು ವೇದಿಕೆ ರಾಜ್ಯ ಉಪಾಧ್ಯಕ್ಷ ಟಿ.ವಿ. ಬಿಂದುಕುಮಾರ್ ತಿಳಿಸಿದರು. (ANUBHAVA MANATAPA)
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ಎಸ್. ಜ್ಯೋತಿಪ್ರಕಾಶ್, ಜಿ. ಶಿವರಾಜ್, ನವೀನ್ ವಾರದ್, ಗಂಗಾಧರ್, ಹೆಚ್.ಎಂ. ದರ್ಶನ್ ಉಪಸ್ಥಿತರಿದ್ದರು.
ADVERTISEMENT (ANUBHAVA MANATAPA)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422