ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ (DCC BANK) ಅಧ್ಯಕ್ಷರಾಗಿ ನಿರೀಕ್ಷೆಯಂತೆ ಆರ್.ಎಂ.ಮಂಜುನಾಥ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಸ್.ಕೆ.ಮರಿಯಪ್ಪ ಕೂಡ ಅವಿರೋಧ ಆಯ್ಕೆಯಾದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈ ಬಾರಿ ಡಿಸಿಸಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ರೋಚಕತೆ ಕಾಣದೆ ಅಂತ್ಯವಾಗಿದೆ. ಆಡಳಿತ ಮಂಡಳಿಯ 13 ಜನರ ಪೈಕಿ 11 ಮಂದಿ ಮಂಜುನಾಥ ಗೌಡ ಅವರ ಬೆಂಬಲಿಗರೇ ಇರುವುದರಿಂದ ಸಹಜವಾಗಿ ಅವರ ಗೆಲುವಿಗೆ ಅನುಕೂಲವಾಗಿದೆ.
ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಇವರಿಬ್ಬರನ್ನು ಹೊರತುಪಡಿಸಿ ಬೇರೆ ನಿರ್ದೇಶಕರು ನಾಮಪತ್ರ ಸಲ್ಲಿಸದಿರುವುದರಿಂದ ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಿಸಿದರು. ಈ ಬಾರಿ ಅಧ್ಯಕ್ಷ ಸ್ಥಾನಕ್ಕೇರುವ ಮೂಲಕ 11ನೇ ಬಾರಿ ಅಧ್ಯಕ್ಷರಾದ ದಾಖಲೆ ಆರ್.ಎಂ.ಮಂಜುನಾಥ ಗೌಡರ ಪಾಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಅನಿರೀಕ್ಷಿತವಾಗಿ ಎಸ್.ಕೆ.ಮರಿಯಪ್ಪ ಆಯ್ಕೆಯಾಗಿದ್ದಾರೆ. ಹಿಂದೆ ಅನೇಕ ಸಹಕಾರ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದಾರೆ. ದೀರ್ಘಕಾಲ ಶಿವಮೊಗ್ಗ ನಗರಸಭೆ, ಬಳಿಕ ಪಾಲಿಕೆ ಸದಸ್ಯರಾಗಿ, ಮೇಯರ್ ಆಗಿ ರಾಜಕೀಯದಲ್ಲೂ ಗಮನ ಸೆಳೆದಿದ್ದರು. ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಇಬ್ಬರನ್ನೂ ಸನ್ಮಾನಿಸಿದರು.
ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?