ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‍ಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಪಾಧ್ಯಕ್ಷರಾದ ಎಂ.ಬಿ.ಚನ್ನವೀರಪ್ಪ ಅವರು ಇನ್ಮುಂದೆ ಡಿಸಿಸಿ ಬ್ಯಾಂಕ್‍ನ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ನಡೆಸಲಿದ್ದಾರೆ.
ಉಪಾಧ್ಯಕ್ಷರು ಅಧ್ಯಕ್ಷರಾಗಿದ್ದು ಯಾಕೆ?
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥಗೌಡ ಅವರನ್ನು ನಿರ್ದೇಶಕರ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಹಾಗಾಗಿ ಅವರು ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಬೈಲಾ ಪ್ರಕಾರ ಉಪಾಧ್ಯಕ್ಷರೇ ಅಧ್ಯಕ್ಷರ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವವರೆಗೆ ಚನ್ನವೀರಪ್ಪ ಅವರು ಪ್ರಭಾರ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಅಧ್ಯಕ್ಷ ಸ್ಥಾನದ ಚುನಾವಣೆ ಯಾವಾಗ?
ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನಲ್ಲಿ 18 ನಿರ್ದೇಶಕರ ಸ್ಥಾನಗಳಿವೆ. ಈಗ ಮಂಜುನಾಥಗೌಡ ಅವರ ನಿರ್ದೇಶಕ ಸ್ಥಾನ ಅನರ್ಹಗೊಂಡಿದೆ. ಇದರಿಂದ ಈಗ 17 ನಿರ್ದೇಶಕರು ಮಾತ್ರ ಇದ್ದಾರೆ. ಅಧ್ಯಕ್ಷ ಸ್ಥಾನ ತೆರವಾಗಿರುವ ಹಿನ್ನೆಲೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈಗಾಗಲೇ ಚುನಾವಣಾಧಿಕಾರಿಯಾಗಿ ನಾಗೇಂದ್ರ ಹೊನ್ನಾಳಿ ಅವರನ್ನು ನೇಮಿಸಲಾಗಿದೆ.
ಮಂಜುನಾಥಗೌಡ ನಿರ್ದೇಶಕರ ಸ್ಥಾನ ಅಮಾನತಾಗಿದ್ದೇಕೆ?
ನಕಲಿ ಚಿನ್ನ ಅಡಮಾನ ಸೇರಿದಂತೆ ಡಿಸಿಸಿ ಬ್ಯಾಂಕ್‍ನಲ್ಲಿ ವ್ಯಾಪಕ ಅವ್ಯವಹಾರದ ಹಿನ್ನೆಲೆ ಬೆಂಗಳೂರಿನಿಂದ ಆಗಮಿಸಿದ್ದ ಅಧಿಕಾರಿಗಳ ತಂಡ, ಕಡತಗಳ ಪರಿಶೀಲನೆ ನಡೆಸಿತ್ತು. ಈ ಬೆಳವಣಿಗೆ ಬೆನ್ನಿಗೆ ರಾಜ್ಯ ಸರ್ಕಾರ ಆರ್.ಎಂ.ಮಂಜುನಾಥಗೌಡ ಅವರನ್ನು ಬ್ಯಾಂಕ್‍ನ ನಿರ್ದೇಶಕ ಸ್ಥಾನದಿಂದ ಅಮಾನತುಪಡಿಸಿತ್ತು. ಇದರಿಂದ ಸಹಜವಾಗಿಯೇ ಮಂಜುನಾಥಗೌಡ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದಾರೆ.
ತನಿಖೆಗೆ ಒತ್ತಾಯಿಸಿದ್ದ ಬಿಜೆಪಿ
ಡಿಸಿಸಿ ಬ್ಯಾಂಕ್‍ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಈ ಸಂಬಂಧ ಮನವಿ ಸಲ್ಲಿಸಿದ್ದರು. ಇದರ ಬೆನ್ನಿಗೆ ಅಧಿಕಾರಿಗಳ ತಂಡ ಡಿಸಿಸಿ ಬ್ಯಾಂಕ್‍ಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿತ್ತು.
ಹತ್ತು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ
ಆರ್.ಎಂ.ಮಂಜುನಾಥಗೌಡ ಅವರು ಹತ್ತು ಬಾರಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾಗಿದ್ದರು. 1997ರ ಜನವರಿಯಲ್ಲಿ ಮಂಜುನಾಥಗೌಡ ಅವರು ಮೊದಲ ಬಾರಿಗೆ ಅಧ್ಯಕ್ಷರಾದರು. 1999ರ ಏಪ್ರಿಲ್‍ನಲ್ಲಿ ಎರಡನೇ ಬಾರಿಗೆ, 2011ರ ಅಕ್ಟೋಬರ್‍ನಲ್ಲಿ ಮೂರನೇ ಬಾರಿಗೆ ಅಧ್ಯಕ್ಷರಾದರು. ನಂತರ 2015ರಿಂದ ಇತ್ತೀಚಿನವರೆಗೆ ಮಂಜುನಾಥಗೌಡ ಅಧ್ಯಕ್ಷರಾಗಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]