ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ (Railway Route) ಕಾಮಗಾರಿ ಆರಂಭವಾಗಿದ್ದು, ಬಿರುಸಾಗಿ ಸಾಗಿದೆ. ಈ ಕುರಿತು ರೈಲ್ವೆ ಇಲಾಖೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಈ ರೈಲ್ವೆ ಮಾರ್ಗದ ಕುರಿತು ಪ್ರಮುಖ ಸಂಗತಿ ಇಲ್ಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇಲ್ಲಿದೆ 4 ಪ್ರಮುಖಾಂಶ
ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ (Railway Route) ಕಾಮಗಾರಿ ಆರಂಭವಾಗಿದೆ. 530.59 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ 150 ಕೋಟ ರೂ. ಘೋಷಣೆ ಮಾಡಲಾಗಿದೆ. ಯೋಜನೆಗಾಗಿ 1141.29 ಎಕರೆ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಫೆಬ್ರವರಿ ತಿಂಗಳಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
GOOD NEWS – ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ, ಗೋವಾ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್, ಬುಕಿಂಗ್ ಶುರು
ರೈಲ್ವೆ ಮಾರ್ಗದ ಕಾಮಗಾರಿ ಎರಡು ಹಂತದಲ್ಲಿ ನಡೆಯಲಿದೆ. ಮೊದಲ ಹಂತದ ಕಾಮಗಾರಿ ಶಿವಮೊಗ್ಗ – ಶಿಕಾರಿಪುರ ನಡುವೆ ನಡೆಯುತ್ತಿದೆ. ಈಗಾಗಲೇ ಸವಳಂಗ ಸಮೀಪದ ಚಿನ್ನಿಕಟ್ಟೆ ಗ್ರಾಮದಲ್ಲಿ ಸಮತಟ್ಟು ಕಾರ್ಯ ಆರಂಭವಾಗಿದೆ. ಈ ಕುರಿತು ರೈಲ್ವೆ ಇಲಾಖೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಟೊ ಪ್ರಕಟಿಸಿದೆ. ನಾರಾಯಣಪುರ ಸಮೀಪ ಹಳಿ ನಿರ್ಮಾಣ ಸಂಬಂಧ ಕಾಮಗಾರಿ ನಡೆಯುತ್ತಿದೆ.
ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಕಾಮಗಾರಿ ಇನ್ನು ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಅಲ್ಲದೆ ಈ ಮಾರ್ಗವು ಬೆಂಗಳೂರು – ಮುಂಬೈ ನಡುವೆ ನೇರ ಸಂಪರ್ಕ ಒದಗಿಸಲಿದೆ ಎಂದು ತಿಳಿಸಲಾಗಿದೆ.
ನೂತನ ರೈಲ್ವೆ ಮಾರ್ಗದಲ್ಲಿ 22 ಪ್ರಮುಖ ಸೇತುವೆ, 62 ಕೆಳ ಸೇತುವೆ, 20 ರಸ್ತೆ ಸೇತುವೆ ನಿರ್ಮಾಣಗೊಳ್ಳಲಿದೆ.