ಶಿವಮೊಗ್ಗ LIVE
ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್, ಲಾಡ್ಜ್, ರೆಸಾರ್ಟ್ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು.

ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್
ಹೊಸ ವರ್ಷಾಚರಣೆ ವೇಳೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಅತಿಥಿಗಳು, ಕುಟುಂಬದವರು, ಮಕ್ಕಳು, ವಯಸ್ಸಾದವರಿಗೆ ಕಿರಿಕಿರಿ ಅಥವಾ ತೊಂದರೆ ಅಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು.
ಕಾರ್ಯಕ್ರಮಗಳಿಗೆ ಬರುವವರು ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಯಾರೂ ಕುಡಿದು ವಾಹನ ಚಾಲನೆ ಮಾಡದಂತೆ ನೋಡಿಕೊಳ್ಳಬೇಕು. ಅಗತ್ಯ ಸಂದರ್ಭ 112 ತುರ್ತು ಸಹಾಯವಾಣಿಗೆ ಕರೆ ಮಾಡಬೇಕು.
ಸಮಾರಂಭಕ್ಕೆ ಹಾಜರಾಗುವ ಅತಿಥಿಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆಯಬೇಕು. ಗಣ್ಯರ ಸಂಖ್ಯೆಗೆ ಅನುಗುಣವಾಗಿ ತಯಾರಿ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮಗಳ ಮಾಹಿತಿಯನ್ನು ಆಯಾ ವ್ಯಾಪ್ತಿಯ ಠಾಣೆಗೆ ನೀಡಬೇಕು. ಸುರಕ್ಷಿತವೆನಿಸುವ ಸಂಖ್ಯೆಯ ಸಾರ್ವಜನಿಕರಿಗೆ ಮಾತ್ರ ಅನುಮತಿ ನೀಡಬೇಕು.

ಕಾರ್ಯಕ್ರಮಗಳಿಗೆ ಹಾಜರಾಗುವ ಮಹಿಳೆಯರು ಹಾಗೂ ಮಕ್ಕಳ ಸುರಕ್ಷೆತೆಗೆ ಮೊದಲ ಆದ್ಯತೆ ನೀಡಬೇಕು. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಅತಿಥಿಗಳ ಐಡಿ ಪ್ರೂಫ್ ಪಡೆಯಬೇಕು. ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.
ಕಾರ್ಯಕ್ರಮದಲ್ಲಿ ಮಾದಕ ವಸ್ತು ಉಪಯೋಗ ಮಾಡುವಂತಿಲ್ಲ. ಒಂದು ವೇಳೆ ಮಾದಕ ವಸ್ತು ಬಳಕೆ ಕಂಡು ಬಂದಲ್ಲಿ NDPS ಕಾಯ್ದೆ ಅಡಿ ಕ್ರಮ ಜರುಗಿಸಲಾಗುತ್ತದೆ.
ಪಟಾಕಿಗಳ ಬಳಕೆ ಮಾಡುವಾಗ ಸುರಕ್ಷಿತ ಕ್ರಮ ಅನುಸರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಬೆಳಕಿನ ವ್ಯವಸ್ಥೆ ಇರಬೇಕು.

ಸೂಕ್ತ ರೀತಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆ ಜೊತೆಗೆ ಕೈ ಜೋಡಿಸಿ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು. ಡಿಸೆಂಬರ್ 31ರ ರಾತ್ರಿ 12 ಗಂಟೆಗೆ ಶುರು ಮಾಡುವ ಸಂಭ್ರಮಾಚರಣೆಯನ್ನು 1 ಗಂಟೆ ಹೊತ್ತಿಗೆ ಮುಗಿಸಬೇಕು.
ಸ್ವಿಮ್ಮಿಂಗ್ ಪೂಲ್‌ಗಳು ಇದ್ದಲ್ಲಿ ಹೆಚ್ಚಿನ ಸುರಕ್ಷತೆ ವಹಿಸಬೇಕು. ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಧ್ವನಿವರ್ಧಕ ಬಳಕೆ ಮಾಡಬೇಕು. ಫೈರ್ ಕ್ಯಾಂಪ್ ನಡೆಯುವಾಗ ಯಾವುದೇ ಅಗ್ನಿ ಅವಘಡ ಆಗದಂಥೆ ಕ್ರಮ ಕೈಗೊಳ್ಳಬೇಕು.
ಹೆಚ್ಚುವರಿ ಅಧೀಕ್ಷಕರಾದ ಎ.ಜಿ.ಕಾರ್ಯಪ್ಪ, ರಮೇಶ್ ಕುಮಾರ್, ಜಿಲ್ಲೆಯ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು ಜಿಲ್ಲೆಯ ವಿವಿಧ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ ಹಾಗೂ ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜಕರು ಸಭೆಯಲ್ಲಿ ಇದ್ದರು.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





