ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು.

Shimoga-Police-meeting-with-hotel-resort-home-stay-owners - New Year 2026

ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌

POINT-1ಹೊಸ ವರ್ಷಾಚರಣೆ ವೇಳೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ಅತಿಥಿಗಳು, ಕುಟುಂಬದವರು, ಮಕ್ಕಳು, ವಯಸ್ಸಾದವರಿಗೆ ಕಿರಿಕಿರಿ ಅಥವಾ ತೊಂದರೆ ಅಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು.

POINT-2ಕಾರ್ಯಕ್ರಮಗಳಿಗೆ ಬರುವವರು ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಯಾರೂ ಕುಡಿದು ವಾಹನ ಚಾಲನೆ ಮಾಡದಂತೆ ನೋಡಿಕೊಳ್ಳಬೇಕು. ಅಗತ್ಯ ಸಂದರ್ಭ 112  ತುರ್ತು ಸಹಾಯವಾಣಿಗೆ ಕರೆ ಮಾಡಬೇಕು.

POINT-3ಸಮಾರಂಭಕ್ಕೆ ಹಾಜರಾಗುವ ಅತಿಥಿಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆಯಬೇಕು. ಗಣ್ಯರ ಸಂಖ್ಯೆಗೆ ಅನುಗುಣವಾಗಿ ತಯಾರಿ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮಗಳ ಮಾಹಿತಿಯನ್ನು ಆಯಾ ವ್ಯಾಪ್ತಿಯ ಠಾಣೆಗೆ ನೀಡಬೇಕು. ಸುರಕ್ಷಿತವೆನಿಸುವ ಸಂಖ್ಯೆಯ ಸಾರ್ವಜನಿಕರಿಗೆ ಮಾತ್ರ ಅನುಮತಿ ನೀಡಬೇಕು.

Shimoga-Police-meeting-with-hotel-resort-home-stay-owners

POINT-4ಕಾರ್ಯಕ್ರಮಗಳಿಗೆ ಹಾಜರಾಗುವ ಮಹಿಳೆಯರು ಹಾಗೂ ಮಕ್ಕಳ ಸುರಕ್ಷೆತೆಗೆ ಮೊದಲ ಆದ್ಯತೆ ನೀಡಬೇಕು. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಅತಿಥಿಗಳ ಐಡಿ ಪ್ರೂಫ್‌ ಪಡೆಯಬೇಕು. ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.

POINT-5ಕಾರ್ಯಕ್ರಮದಲ್ಲಿ ಮಾದಕ ವಸ್ತು ಉಪಯೋಗ ಮಾಡುವಂತಿಲ್ಲ. ಒಂದು ವೇಳೆ ಮಾದಕ ವಸ್ತು ಬಳಕೆ ಕಂಡು ಬಂದಲ್ಲಿ NDPS ಕಾಯ್ದೆ ಅಡಿ ಕ್ರಮ ಜರುಗಿಸಲಾಗುತ್ತದೆ.

POINT-6ಪಟಾಕಿಗಳ ಬಳಕೆ ಮಾಡುವಾಗ ಸುರಕ್ಷಿತ ಕ್ರಮ ಅನುಸರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಬೆಳಕಿನ ವ್ಯವಸ್ಥೆ ಇರಬೇಕು.

Shimoga-Police-meeting-with-hotel-resort-home-stay-owners

POINT-7ಸೂಕ್ತ ರೀತಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಪೊಲೀಸ್ ಇಲಾಖೆ ಜೊತೆಗೆ ಕೈ ಜೋಡಿಸಿ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಬೇಕು. ಡಿಸೆಂಬರ್‌ 31ರ ರಾತ್ರಿ 12 ಗಂಟೆಗೆ ಶುರು ಮಾಡುವ ಸಂಭ್ರಮಾಚರಣೆಯನ್ನು 1 ಗಂಟೆ ಹೊತ್ತಿಗೆ ಮುಗಿಸಬೇಕು.

POINT-8ಸ್ವಿಮ್ಮಿಂಗ್‌ ಪೂಲ್‌ಗಳು ಇದ್ದಲ್ಲಿ ಹೆಚ್ಚಿನ ಸುರಕ್ಷತೆ ವಹಿಸಬೇಕು. ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಧ್ವನಿವರ್ಧಕ ಬಳಕೆ ಮಾಡಬೇಕು. ಫೈರ್ ಕ್ಯಾಂಪ್ ನಡೆಯುವಾಗ ಯಾವುದೇ ಅಗ್ನಿ ಅವಘಡ ಆಗದಂಥೆ ಕ್ರಮ ಕೈಗೊಳ್ಳಬೇಕು.

ಹೆಚ್ಚುವರಿ ಅಧೀಕ್ಷಕರಾದ ಎ.ಜಿ.ಕಾರ್ಯಪ್ಪ, ರಮೇಶ್ ಕುಮಾರ್, ಜಿಲ್ಲೆಯ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಮತ್ತು  ಜಿಲ್ಲೆಯ ವಿವಿಧ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂ ಸ್ಟೇ ಹಾಗೂ ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜಕರು ಸಭೆಯಲ್ಲಿ ಇದ್ದರು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 29, 2025 at 7:29 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 29, 2025

Leave a Comment