ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020
ಕರೋನ ನಿಯಂತ್ರಣಕ್ಕೆ ಕಟ್ಟುನಿಟ್ಟು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇವತ್ತಿಂದ ಶಿವಮೊಗ್ಗ ನಗರದಲ್ಲಿ ಸಂಜೆ ಆರು ಗಂಟೆಯಿಂದಲೇ ಕರ್ಫ್ಯೂ ಜಾರಿಗೆ ಬರಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿವಿಧ ಸಂಘ, ಸಂಸ್ಥೆಗಳ ಮುಖಂಡರ ಜೊತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಜಿಲ್ಲಾ ಉಸ್ತುವಾರಿ ಸಚಚ ಕೆ.ಎಸ್.ಈಶ್ವರಪ್ಪ, ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ರಾತ್ರಿ 8 ಗಂಟೆ ಬಳಿಕ ಕರ್ಫ್ಯೂ ಇರಲಿದೆ. ಆದರೆ ಶಿವಮೊಗ್ಗದಲ್ಲಿ ಸಂಜೆ ಆರು ಗಂಟೆಯಿಂದಲೇ ಕರ್ಫ್ಯೂ ಜಾರಿಯಾಗಲಿದೆ.
ರಸ್ತೆಗಿಳಿದರೆ ಕಡ್ಡಾಯ ಕ್ರಮ
ಆರು ಗಂಟೆ ಬಳಿಕ ಯಾರಾದರೂ ರಸ್ತೆಗಿಳಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಓಡಾಡುವವರ ವಿರುದ್ಧ 200 ರೂ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಸುಮಾರು 42 ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. 30 ಕ್ಕೂ ಹೆಚ್ಚು ಮಂದಿಯಿಂದ ಸಲಹೆ ಸ್ವೀಕರಿಸಲಾಯಿತು.