ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ಕರೋನ ನೆಪದಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ನಿರ್ಬಂಧ ವಿಧಿಸಿರುವುದು ತಪ್ಪು. ಯುವ ಜನರ ಸಂಭ್ರಮಕ್ಕೆ ತಡೆಯೊಡ್ಡಿ, ಅವರ ಹಕ್ಕುಗಳನ್ನು ಕಸಿಯುವ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ಈ ನಿರ್ಬಂಧಕ್ಕೆ ತಮ್ಮ ಧಿಕ್ಕಾರವಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ರಾಜರಾಜೇಶ್ವರಿ ನಗರ ಚುನಾವಣೆ ಪ್ರಚಾರದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು. ಆಗ ಯಡಿಯೂರಪ್ಪ ಅವರಿಗೆ ಕರೋನ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದರು.
ಯುವಕರ ಹಕ್ಕು ಕಸಿಯಲು ಯತ್ನ
ಹೊಸ ವರ್ಷಾಚರಣೆಗೆ ಅವಕಾಶ ನೀಡಬೇಕು. ಯುವಕರ ಸಂಭ್ರಮಕ್ಕೆ ತಡೆಯೊಡ್ಡಬಾರದು. ಇದು ಯುವಕರ ಹಕ್ಕು ಕಸಿಯುವ ಯತ್ನ ಎಂದು ಆರೋಪಿಸಿದರು.
ರೈತ ಹೋರಾಟದ ಧಮನ
ದೆಹಲಿಯಲ್ಲಿ ಸಾವಿರಾರು ಸಂಖ್ಯೆಯ ರೈತರು ಹೋರಾಟ ನಡೆಸುತ್ತಿದ್ದಾರೆ. ಲಂಡನ್ ವೈರಸ್ ಎಂದು ನೆಪ ಹೇಳಿ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಬೇಳೂರು ಗೋಪಾಲಕೃಷ್ಣ ಸಂಶಯ ವ್ಯಕ್ತಪಡಿಸಿದರು.
VIDEO REPORT
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422