SHIVAMOGGA LIVE NEWS | 30 DECEMBER 2022
ಶಿವಮೊಗ್ಗ : ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲೆಯಲ್ಲಿ ಸಿದ್ಧತೆಗಳು ಆರಂಭವಾಗಿದೆ. ನಗರದ ವಿವಿಧ ಕ್ಲಬ್ ಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ನಡುವೆ ಪೊಲೀಸ್ ಇಲಾಖೆಯು ಕ್ಲಬ್ ಮಾಲೀಕರು, ಮ್ಯಾನೇಜರ್ ಗಳಿಗೆ 10 ಪಾಯಿಂಟ್ ಸೂಚನೆ ನೀಡಿದೆ. (new year guideline)
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ಕ್ಲಬ್ ಮಾಲೀಕರಿಗೆ ಸೂಚನೆಗಳನ್ನು ನೀಡಿದ್ದಾರೆ.
new year guideline
ಸೂಚನೆ 1 : ಸರ್ಕಾರದ ಆದೇಶದಂತೆ ಹೊಸ ವರ್ಷಾಚರಣೆ ಮಾಡಬೇಕು. ಬೆಳಗಿನ ಜಾವ 1 ಗಂಟೆಯೊಳಗೆ ಕಾರ್ಯಕ್ರಮ ಮುಗಿಸಬೇಕು.
ಸೂಚನೆ 2 : ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು.
ಸೂಚನೆ 3 : ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತು ಬಳಸಬಾರದು.
ಸೂಚನೆ 4 : ಮದ್ಯ ಮಾರಾಟಕ್ಕೆ ಸಮಯ ನಿಗದಿಪಡಿಸಲಾಗಿದೆ. ರಾತ್ರಿ 11:30 ರ ವರೆಗೆ ಮಾತ್ರ ಮಾರಾಟ ಮಾಡಬೇಕು.
ಸೂಚನೆ 5 : ಮದ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡಬೇಕು.
ಸೂಚನೆ 6 : ಕಾರ್ಯಕ್ರಮಗಳಲ್ಲಿ ನಿಗದಿಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಬಳಕೆ ಮಾಡುವಂತಿಲ್ಲ.
ಸೂಚನೆ 7 : ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ಸೂಚನೆ 8 : ಗುಂಪನ್ನು ನಿಯಂತ್ರಿಸುವ ಸಂಬಂಧ ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸಬೇಕು.
ಸೂಚನೆ 9 : ಹೊಸ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು. ಪ್ರತಿಯೊಬ್ಬರಿಗು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ನೋ ಮಾಸ್ಕ್ ನೋ ಎಂಟ್ರಿ ಎಂಬ ಬೋರ್ಡ್ ಎಲ್ಲರಿಗು ಕಾಣುವಂತೆ ಪ್ರದರ್ಶಿಸಬೇಕು.
ಸೂಚನೆ 10 : 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸದೇ ಇರುವುದು ಸೂಕ್ತ.
ಇದನ್ನೂ ಓದಿ – ಮೈಸೂರು -ತಾಳಗುಪ್ಪ ಎಕ್ಸ್ ಪ್ರೆಸ್ ಸೇರಿ ಶಿವಮೊಗ್ಗದ 6 ರೈಲುಗಳ ಸಮಯದಲ್ಲಿ ಬದಲಾವಣೆ, ಯಾವೆಲ್ಲ ರೈಲುಗಳು?
ಇನ್ನು, ಯಾವುದೆ ತುರ್ತು ಸಂದರ್ಭ ಹತ್ತಿರದ ಪೊಲೀಸ್ ಠಾಣೆ, ಕಂಟ್ರೋಲ್ ರೂಂಗೆ ಕರೆ ಮಾಡಬೇಕು ಎಂದು ತಿಳಿಸಲಾಗಿದೆ. 9480803300 / 08182-261413 ಅಥವಾ 112ಗೆ ಕರೆ ಮಾಡಬೇಕು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200