ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

SHIVAMOGGA LIVE NEWS, 25 DECEMBER 2024

ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು.

ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌

#f1f1f1 - POINT 1ಹೊಸ ವರ್ಷ ಆಚರಣೆಯ ಹಿನ್ನೆಲೆ ಯಾವುದೇ ಕಾರ್ಯಕ್ರಮ ಆಯೋಜಿಸುವಾಗ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ ಮತ್ತು ಅನುಮತಿ ಪಡೆಯದೆ ಯಾವುದೇ ರೀತಿಯ ಕಾರ್ಯಕ್ರಮ ಆಯೋಜಿಸುವಂತಿಲ್ಲ.

Kalleshwara-Enterprises.webp

#f1f1f1 - POINT 2ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡಬೇಕು. ಆಯೋಜಿಸಲಾಗುವ ಕಾರ್ಯಕ್ರಮಕ್ಕೆ ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು.

New Year Meeting in Shimoga Police office SP Mithun Kumar IPS

#f1f1f1 - POINT 3ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತು ಹಾಗೂ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಬೇಕು. ಇಲ್ಲವಾದಲ್ಲಿ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಬೇಕು.

#f1f1f1 - POINT 4ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12 ಗಂಟೆಗೆ ಆಚರಿಸಿ, ರಾತ್ರಿ 1 ಗಂಟೆಯ ಒಳಗೆ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮ ಮುಕ್ತಾಯ ಮಾಡಬೇಕು.

#f1f1f1 - POINT 5ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸಬೇಕು. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ಅತಿಥಿಗಳ ಹೆಸರು, ವಿವರವನ್ನು ಬರೆದುಕೊಂಡು, ಒಂದು ಗುರುತಿನ ಚೀಟಿಯನ್ನು ಪಡೆಯಬೇಕು.

New Year Meeting in Shimoga Police office SP Mithun Kumar IPS

#f1f1f1 - POINT 6ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂದಿ ನೇಮಿಸಬೇಕು. ಸಾರ್ವಜನಿಕರ ಸುರಕ್ಷತೆ ಬಗ್ಗೆ ನಿಗಾವಹಿಸಬೇಕು.

New Year Meeting in Shimoga Police office SP Mithun Kumar IPS

#f1f1f1 - POINT 7ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ. ಎಲ್ಲಾ ಸುರಕ್ಷತಾ ಕ್ರಮಗಳನ್ನು  ಕೈಗೊಂಡು, ಎಚ್ಚರದಿಂದಿದ ಇರಬೇಕು. ಯಾವುದೇ ಘಟನೆ ಜರುಗಿದಾಗ ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಬೇಕು.

New Year Meeting in Shimoga Police office SP Mithun Kumar IPS

#f1f1f1 - POINT 8ಕಾರ್ಯಕ್ರಮದಲ್ಲಿ ಅಳವಡಿಸುವ ಧ್ವನಿವರ್ಧಕ, ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಅಥವಾ ತೊಂದರೆಯಾಗದ ರೀತಿ ನೋಡಿಕೊಳ್ಳಬೇಕು. ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಸ್ವಿಮ್ಮಿಂಗ್ ಪೂಲ್ ಇದ್ದಲ್ಲಿ, ಹೆಚ್ಚಿನ ಗಮನ ಹರಿಸಬೇಕುಯ. ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಬೇಕು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸುರೇಶ್, ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಶಿಕಾರಿಪುರ ಡಿವೈಎಸ್‌ಪಿ ಕೇಶವ್, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ, ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು, ಸಬ್‌ ಇನ್ಸ್‌ಪೆಕ್ಟರ್‌ಗಳು, ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾಟ್‌ಗಳ ಮಾಲೀಕರು ಮತ್ತು ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದ ಮೂವರು ಉದ್ಯಮಿಗಳಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment