ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 OCTOBER 2023
RIPPONPETE : ಡೆಂಘೆ ಜ್ವರದಿಂದ (Dengue Fever) ಬಳಲುತ್ತಿದ್ದ ನವವಿವಾಹಿತೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.
ರಿಪ್ಪನ್‌ಪೇಟೆಯ ಶಬರೀಶ ನಗರದ ನಿವಾಸಿ ಮಂಜುನಾಥ್ ಅವರ ಪತ್ನಿ ಮಧುರಾ (31) ಡೆಂಘೆ ಜ್ವರದಿಂದ ಭಾನುವಾರ ಬೆಳಗಿನ ಜಾವ ಮೃತಪಟ್ಟರು. ಆರು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.
ಇದನ್ನೂ ಓದಿ- ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು?
ವಾರದ ಹಿಂದೆ ಜ್ವರ ಕಾಣಿಸಿತ್ತು
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮದ ತಾಯಿ ಮನೆಯಲ್ಲಿ ಇದ್ದರು. ವಾರದ ಹಿಂದೆ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶನಿವಾರ ಬೆಳಿಗ್ಗೆ ಮನೆಗೆ ಹಿಂತಿರುಗಿದ್ದರು. ಸಂಜೆ ವೇಳೆ ಜ್ವರ, ತಲೆ ನೋವು, ಹೊಟ್ಟೆ ನೋವು ಮರುಕಳಿಸಿದ ಕಾರಣ, ತಕ್ಷಣವೇ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು
ಜ್ವರ ನಿಯಂತ್ರಣಕ್ಕೆ ಬಾರದ ಕಾರಣ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರದೊಯ್ಯುವಾಗ ಮಾರ್ಗಮಧ್ಯೆ ಅವರು ಮೃತಪಟ್ಟರು. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಗಾಂಧಿನಗರದಲ್ಲಿ ನಡೆಯಿತು.

LATEST NEWS
- ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

- ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

- ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

- ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

- ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್, ಏನಿದು?

About The Editor
ನಿತಿನ್ ಆರ್.ಕೈದೊಟ್ಲು











