ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RIPPONPETE : ಡೆಂಘೆ ಜ್ವರದಿಂದ (Dengue Fever) ಬಳಲುತ್ತಿದ್ದ ನವವಿವಾಹಿತೆ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಿಪ್ಪನ್‌ಪೇಟೆಯ ಶಬರೀಶ ನಗರದ ನಿವಾಸಿ ಮಂಜುನಾಥ್ ಅವರ ಪತ್ನಿ ಮಧುರಾ (31) ಡೆಂಘೆ ಜ್ವರದಿಂದ ಭಾನುವಾರ ಬೆಳಗಿನ ಜಾವ ಮೃತಪಟ್ಟರು. ಆರು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.
ಇದನ್ನೂ ಓದಿ- ಮೂವರು ಸಜೀವ ದಹನ, ಸ್ಥಳಕ್ಕೆ ಎಂಎಲ್‌ಎ ದೌಡು, ಘಟನೆ ಕುರಿತು ಹೇಳಿದ್ದೇನು?
ವಾರದ ಹಿಂದೆ ಜ್ವರ ಕಾಣಿಸಿತ್ತು
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ಸಾಗರ ತಾಲ್ಲೂಕಿನ ತಾಳಗುಪ್ಪ ಗ್ರಾಮದ ತಾಯಿ ಮನೆಯಲ್ಲಿ ಇದ್ದರು. ವಾರದ ಹಿಂದೆ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶನಿವಾರ ಬೆಳಿಗ್ಗೆ ಮನೆಗೆ ಹಿಂತಿರುಗಿದ್ದರು. ಸಂಜೆ ವೇಳೆ ಜ್ವರ, ತಲೆ ನೋವು, ಹೊಟ್ಟೆ ನೋವು ಮರುಕಳಿಸಿದ ಕಾರಣ, ತಕ್ಷಣವೇ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು
ಜ್ವರ ನಿಯಂತ್ರಣಕ್ಕೆ ಬಾರದ ಕಾರಣ, ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರದೊಯ್ಯುವಾಗ ಮಾರ್ಗಮಧ್ಯೆ ಅವರು ಮೃತಪಟ್ಟರು. ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ಗಾಂಧಿನಗರದಲ್ಲಿ ನಡೆಯಿತು.