ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜುಲೈ 2021
2023ರ ವಿಧಾನಸಭಾ ಚುನಾವಣೆಯಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ. ನಾನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ. ಹಾಗಾಗಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದೆರೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಸೇರಿದ ಏಳು ಶಾಸಕರಿದ್ದರೆ. ಆದರೆ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಾಮಕಾವಸ್ಥೆ ಸಚಿವ ಸ್ಥಾನ ನೀಡಲಾಗಿದೆ. ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದರು.
ಹಿಂದುತ್ವ ಬಿಜೆಪಿ, ಆರ್‌ಎಸ್‌ಎಸ್‍ನವರದ್ದು ಮಾತ್ರವಲ್ಲ. ಜೀವನ ಪದ್ಧತಿಯೇ ಹಿಂದುತ್ವ. ಸರ್ಕಾರ ಕೂಡಲೇ ಆರ್ಯ ಈಡಿಗ ನಿಗಮ ಮಂಡಳಿ ಸ್ಥಾಪಿಸುವ ಮೂಲಕ ಹಿಂದುಳಿದ ಸಮುದಾಯಕ್ಕೆ ಸಹಾಯ ಮಾಡಬೇಕು ಎಂದರು. ಇದೇ ವೇಳೆ ಜಿಲ್ಲೆಯಲ್ಲಿ ನಿರ್ಮಾಣ ವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಹೆಸರಿಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಹುಲ್ತಿಕೊಪ್ಪ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಎಸ್.ಸಿ. ರಾಮಚಂದ್ರ, ಮಹಿಳಾ ಸಂಘದ ಅಧ್ಯಕ್ಷೆ ಗೀತಾಂಜಲಿ ದತ್ತಾತ್ರೇಯ, ಮುಖಂಡರಾದ ವೀಣಾ, ಜಿ.ಡಿ.ಮಂಜುನಾಥ, ಕೆ.ವೈ. ರಾಮಚಂದ್ರಪ್ಪ, ಸುಧಾಕರ್, ಕೆ. ಉಮೇಶ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422