ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗ: ಭವಿಷ್ಯ ನಿಧಿ (EPF) ಚಂದಾದಾರರು, ಉದ್ಯೋಗದಾತರು ಮತ್ತು ಪಿಂಚಣಿದಾರರ ಕುಂದುಕೊರತೆಗಳ ನಿವಾರಣೆಗಾಗಿ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯ ವತಿಯಿಂದ ಮಾರ್ಚ್ 27 ರಂದು ನಿಧಿ ಆಪ್ಕೆ ನಿಕಟ್ 2.0 (Nidhi Aapke Niqat) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಪಟ್ಟಣ ಪಂಚಾಯತ್ ಸಭಾಂಗಣ. ದಾವಣಗೆರೆ ಜಿಲ್ಲೆಯ ಆಧಿಶಕ್ತಿ ಕಾರ್ಸ್ ಪ್ರೈವೇಟ್ ಲಿಮಿಟೆಡ್, ಅವರಗೆರೆ, ಓಲ್ಡ್ ಪಿ.ಬಿ. ರಸ್ತೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ. ಪಿಂಚಣಿದಾರರಿಗೆ ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

SHIMOGA-NEWS-UPDATE

ಇದನ್ನೂ ಓದಿ – ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Sunrise Facility Services, Sri sai Trust Shimoga

Leave a Comment