SHIMOGA NEWS, 9 NOVEMBER 2024 : ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಇವತ್ತು ಶಿವಮೊಗ್ಗ ನಗರ ಪ್ರವೇಶಿಸುತ್ತಿದೆ. ನಾಳೆ ತುಂಗಾ (Tunga) ನದಿ ದಂಡೆಯ ಮೇಲೆ ತುಂಗಾ ಆರತಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಶೃಂಗೇರಿಯಿಂದ ಕಿಷ್ಕಿಂದೆಯವರೆಗೆ ನಿರ್ಮಲ ತುಂಗಭದ್ರ ಅಭಿಯಾನದ ಭಾಗವಾಗಿ ಜಲ ಜಾಗೃತಿ ಮತ್ತು ಜನ ಜಾಗೃತಿಗಾಗಿ ಪಾದಯಾತ್ರೆ ನಡೆಸಲಾಗುತ್ತಿದೆ. ಇವತ್ತು ಸಂಜೆ ಪಾದಯಾತ್ರೆ ಶಿವಮೊಗ್ಗ ನಗರ ಪ್ರವೇಶಿಸಲಿದೆ ಎಂದು ತಿಳಿಸಿದರು.
ನ.10ರಂದು ಬೆಳಗ್ಗೆ 8.30ಕ್ಕೆ ಡಾ. ಅಂಬೇಡ್ಕರ್ ಭವನದಲ್ಲಿ ಪ್ರಬುದ್ಧರ ಸಭೆ ನಡೆಯಲಿದೆ. ಸಂಜೆ 6.30ಕ್ಕೆ ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ಆರತಿ ಆಯೋಜಿಸಲಾಗಿದೆ. ನ.11ರಂದು ಬೆಳಗ್ಗೆ 8 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಯುವ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಎಸ್.ಎನ್.ಚನ್ನಬಸಪ್ಪ, ಶಾಸಕ
ತುಂಗಾ ಆರತಿಗೆ ಸಿದ್ಧತೆ ಜೋರು
ಕೋರ್ಪಲಯ್ಯ ಛತ್ರ ಮಂಟಪದಲ್ಲಿ ತುಂಗಾ ಆರತಿಗೆ ಸಿದ್ಧತೆ ನಡೆಯುತ್ತಿದೆ. ಮಂಟಪಕ್ಕೆ ಸುಣ್ಣ ಬಳಿದು ಅಣಿಗೊಳಿಸಲಾಗಿದೆ. ಮಂಟಪದ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಶೃಂಗೇರಿ ಮಠದ ಅಭಿನವ ಶಂಕರ ಭಾರತಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಮಾಜಿ ಎಂಎಲ್‌ಸಿ ರುದ್ರೇಗೌಡ ಸೇರಿ ಹಲವರು ಭಾಗವಹಿಸಲಿದ್ದಾರೆ.
ತೀರ್ಥಹಳ್ಳಿಯಲ್ಲಿ ಪಾದಯಾತ್ರೆಗೆ ಭಾರಿ ಬೆಂಬಲ
ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ಪರ್ಯಾವರಣ ಟ್ರಸ್ಟ್ ಸಹಯೋಗದಲ್ಲಿ ಶೃಂಗೇರಿಯಿಂದ ಹೊರಟಿರುವ ನಿರ್ಮಲ ತುಂಗಭದ್ರಾ ಅಭಿಯಾನ ಪಾದಯಾತ್ರೆಗೆ ತೀರ್ಥಹಳ್ಳಿಯಲ್ಲಿ ಭಾರಿ ಬೆಂಬಲ ವ್ಯಕ್ತವಾಯಿತು. ಶುಕ್ರವಾರ ಭೀಮನಕಟ್ಟೆ ಮಾರ್ಗವಾಗಿ ಪಾದಯಾತ್ರೆಯು ತೀರ್ಥಹಳ್ಳಿ ಪಟ್ಟಣ ಪ್ರವೇಶಿಸಿತು. ನಂತರ ಗ್ರಾಮೀಣ ಭವನದಲ್ಲಿ ಸಭೆಯಲ್ಲಿ ನಡೆಯಿತು. ಪರಿಸರ ಹೋರಾಟಗಾರರು ಹಾಗೂ ರಾಜಕೀಯ ಮುಖಂಡರು ಜಲಜಾಗೃತಿ ಮೂಡಿಸಿದರು.
ಇದನ್ನೂ ಓದಿ » ಶಿವಮೊಗ್ಗದ ಯುವತಿಗೆ ಮುಂಬೈ ಪೊಲೀಸರಿಂದ ಫೋನ್, ಆಮೇಲೆ ಕಾದಿತ್ತು ದೊಡ್ಡ ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200