ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2022
SHIMOGA | ಯಡಿಯೂರಪ್ಪ ಅವರು ಮಠಗಳಿಗೆ ಅನುದಾನ (funds for mutts) ಬಿಡುಗಡೆ ಮಾಡಿದ್ದನ್ನು ಹಲವರು ಪ್ರಶ್ನಿಸಿದರು. ಆದರೆ ಮಠಗಳನ್ನು ಚೈತನ್ಯಶೀಲವಾಗಿ ಇರಿಸುವುದಕ್ಕಾಗಿ ಯಡಿಯೂರಪ್ಪ ಅವರು ಅನುದಾನ ನೀಡಿದರು ಎಂದು ಗುರುಗಳು ಹೇಳಿದ್ದರು ಎಂದು ಶ್ರೀ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಕುವೆಂಪು ರಂಗ ಮಂದಿರದಲ್ಲಿ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು, ಸ್ವಾಮಿಜಿಗಳು ಚೈತನ್ಯಶೀಲವಾಗಿದ್ದರೆ ಭಕ್ತರನ್ನು ಚೈತನ್ಯಶೀಲವಾಗಿಸುತ್ತಾರೆ. ಇದೆ ಕಾರಣಕ್ಕೆ ಯಡಿಯೂರಪ್ಪ ಅವರು ಮಠಗಳಿಗೆ ಅನುದಾನ ಬಿಡುಗಡೆ ಮಾಡಿದರು. ಈ ಮೂಲಕ ಸನ್ಯಾಸಿಗಳನ್ನು ಚೈತನ್ಯಶೀಲರನ್ನಾಗಿಸಿದರು ಎಂದರು.
(funds for mutts)
ಒಕ್ಕಲಿಗರ ಸಂಘಕ್ಕೆ ವಿವೇಕಾನಂದರೆ ಸ್ಫೂರ್ತಿ
ಸಮುದಾಯದ ಸಂಘಟನೆ ಅಂದರೆ ಜನರನ್ನು ಒಗ್ಗೂಡಿಸುವುದಷ್ಟೆ ಅಲ್ಲ. ಸಾಂಸ್ಕೃತಿಕವಾಗಿ, ಆಧ್ಯಾತ್ಮಿಕವಾಗಿಯು ಒಗ್ಗೂಡಬೇಕು. ಇದೆ ಉದ್ದೇಶದೊಂದಿಗೆ ಒಕ್ಕಲಿಗರ ಸಂಘ ಹುಟ್ಟಿದ್ದು. ಸ್ವಾಮಿ ವಿವೇಕಾನಂದ ಅವರು ಇದಕ್ಕೆ ಪ್ರೇರಣೆಯಾಗಿದ್ದರು ಎಂದು ಶ್ರೀಗಳು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’
ಕೆ.ಹೆಚ್.ರಾಮಯ್ಯ ಎಂಬುವವರು ಸ್ವಾಮಿ ವಿವೇಕಾನಂದ ಅವರ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದರು. ಅವರು ಮಾರ್ಗದರ್ಶನದಂತೆ ಕೆ.ಹೆಚ್.ರಾಮಯ್ಯ ಅವರು ಒಕ್ಕಲಿಗರ ಸಂಘಕ್ಕೆ ಅಡಿಪಾಯ ಹಾಕಿದರು. ಸಾಂಸ್ಕೃತಿಕವಾಗಿ, ಆಧ್ಯಾತ್ಮಿಕವಾಗಿ ಈ ಸಮುದಾಯನ್ನು ಒಗ್ಗೂಡಿಸುವ ಉದ್ದೇಶದಿಂದ ಸಂಘ ಆರಂಭಿಸಲಾಯಿತು ಎಂದು ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
[su_quote cite=”ಶ್ರೀ ಪ್ರಸನ್ನನಾಥ ಸ್ವಾಮೀಜಿ“]ಇನ್ನೊಂದು ವರ್ಷದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಎಲ್ಲರು ದಾನ ಮಾಡಬೇಕು. ದಾನ ಮಾಡುವಾಗ ಅನ್ಯ ಯೋಚನೆ ಮಾಡಬಾರದು. ಇನ್ನು, ದಾನ ಮಾಡಿದ್ದು ಪತಿ, ಪತ್ನಿಗು ಗೊತ್ತಾಗದಂತೆ ಇರಬೇಕು.[/su_quote]
(funds for mutts)
ಸರ್ಕಾರದ ಕೆಲಸ ಮಠಗಳು ಮಾಡುತ್ತಿವೆ
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರ ಮಾಡುವ ಕೆಲಸಗಳನ್ನು ಮಠಗಳು ಮಾಡುತ್ತಿವೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮಠಗಳಿಗೆ ಅನುದಾನ ನೀಡಿದ್ದರು. ಆಗ ಹಲವರು ಟೀಕೆ ಮಾಡಿದ್ದರು. ಆಗ ಯಡಿಯೂರಪ್ಪ ಅವರು ಸರ್ಕಾರ ಮಾಡುವ ಕೆಲಸವನ್ನು ಮಠಗಳು ಮಾಡುತ್ತಿವೆ. ಅದಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದರು ಎಂದು ಸ್ಮರಿಸಿದರು.

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















