ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 SEPTEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ಗೆ (Bandh) ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಸಂಘಟನೆಗಳ ಪ್ರತಿಭಟನೆ ಹೊರತು ಬಂದ್ ಮಾಡಲು ವ್ಯಾಪಾರಿಗಳು ನಿರಾಸಕ್ತಿ ತೋರಿದರು.
ಶಿವಮೊಗ್ಗ ನಗರದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಎಂದಿನಂತೆ ಇತ್ತು. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೆ ಬದಲಾವಣೆ ಆಗಿರಲಿಲ್ಲ. ವ್ಯಾಪಾರ, ವಹಿವಾಟು ಕೂಡ ಸಹಜವಾಗಿತ್ತು. ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿ ಬಜಾರ್‌ನಲ್ಲಿ ಜನ ಸಂಖ್ಯೆ ಹೆಚ್ಚಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಇರದ ಹಿನ್ನೆಲೆ ವಿದ್ಯಾರ್ಥಿಗಳು ಕೂಡ ಎಂದಿನಂತೆ ಸಂಚರಿಸಿದರು. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಡೆದವು.
ನಗರದ ಪ್ರಮುಖ ರಸ್ತೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೆರವಣಿಗೆ ನಡೆಸಲಾಯಿತು. ನೆಹರೂ ರಸ್ತೆಯಲ್ಲಿ ಅಂಗಡಿ ಬಂದ್ ಮಾಡುವಂತೆ ವರ್ತಕರಿಗೆ ಒತ್ತಾಯಿಸಿದರು. ಆಗ ಕರವೇ ಕಾರ್ಯಕರ್ತರು ಮತ್ತು ಅಂಗಡಿ ಮಾಲೀಕರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಅಂಗಡಿ ಬಂದ್ ಮಾಡುವಂತೆ ಒತ್ತಡ ಹೇರುವಂತಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಸೂಚಿಸಿದರು.
ಸಾಲು ಸಾಲು ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕನ್ನಡಪರ ಸಂಘಟನೆಗಳು, ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಬೆಳಗ್ಗೆ ಕನ್ನಡಪರ ಸಂಘಟನೆಗಳ ಮುಖಂಡರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು. ನಿಲ್ದಾಣದಿಂದ ಬಸ್ಸುಗಳು ಹೊರಗೆ ಹೋಗದಂತೆ ಅಡ್ಡಲಾಗಿ ನಿಂತರು. ಕೂಡಲೆ ಪೊಲೀಸರು ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ
ರಾಜ್ಯ ರೈತ ಸಂಘ ಮತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ವಕೀಲರ ಸಂಘ, ದುರ್ಗಿಗುಡಿ ಕನ್ನಡ ಸಂಘ, ರಾಜ್ಯ ಕನ್‌ಸ್ಟ್ರಕ್ಷನ್ ವರ್ಕರ್ಸ್ ಅಸೋಸಿಯೇಷನ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.