ಶಿವಮೊಗ್ಗ ನಗರದ ಕೆಲ ಬಡಾವಣೆಗಳಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

SHIVAMOGGA LIVE NEWS | 26 SEPTEMBER 2023➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಆದ್ದರಿಂದ ಸೆ. 27 ಮತ್ತು 28 ರಂದು ನಗರದ ವಿವಿಧೆಡೆ ಕುಡಿಯುವ ನೀರು (DRINKING WATER) ಸರಬರಾಜು ವ್ಯತ್ಯಯವಾಗಲಿದೆ.

ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿ ನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಗರ ಸಂಪೂರ್ಣ ಕೇಸರಿಮಯ, ಗಾಂಧಿ ಬಜಾರ್‌ ಮಹಾದ್ವಾರದ ಮೇಲೆ ಉಗ್ರ ನರಸಿಂಹ, ಹೇಗಿದೆ ಅಲಂಕಾರ?

Leave a Comment