SHIVAMOGGA LIVE | 9 JULY 2023
SHIMOGA : ನಗರದಾದ್ಯಂತ ಜು.10ರಂದು ಕುಡಿಯುವ ನೀರು (Drinking Water) ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ತುರ್ತು ನಿರ್ವಹಣೆ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದೆ. ಆದ್ದರಿಂದ ಜು.10ರಂದು ನಗರದಲ್ಲಿ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200