SHIVAMOGGA LIVE NEWS | FISH | 2 ಜೂನ್ 2022
ಇನ್ನೆರಡು ತಿಂಗಳು ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ ಮತ್ತು ಜುಲೈ ತಿಂಗಳ ಮುಂಗಾರು ಮಳೆಗಾಲದ ಅವಧಿಯಲ್ಲಿ, ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯಲಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಜಲಾಶಯಗಳು ಹಾಗೂ ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಏಳು ಭಾರಿ ಸ್ಪೋಟ, ಅಕ್ಕಪಕ್ಕದ ನಿವಾಸಿಗಳಿಗೆ ಢವಢವ, ಗೋಡೆಗಳಲ್ಲಿ ಬಿರುಕು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.