ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020
ಪರಿಶಿಷ್ಟ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೇರಿದ ಜಾಗದಲ್ಲಿ ಗೋಶಾಲೆಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸ.ನಂ.78 ರಲ್ಲಿ ಸುಮಾರು 43 ಎಕರೆ ಜಾಗವಿದೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ವರ್ಗದವರು ಸುಮಾರು 300ಕ್ಕೂ ಹೆಚ್ಚು ಜೋಪಡಿಗಳನ್ನು ಹಾಕಿಕೊಂಡು ಹಲವು ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈಗ ಕೆಲವರು ಇದಕ್ಕೆ ಹೈಕೋರ್ಟ್ನಿಂದ ಮಂಜಪ್ಪ ಮತ್ತು ಇತರರು ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ಇದಿನ್ನು ನ್ಯಾಯಾಲಯದಲ್ಲಿದೆ.
ಇದರ ಮಧ್ಯೆ ಈ ಜಾಗದಲ್ಲಿ ಗೋ ಶಾಲೆ ತೆರೆಯಲು ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಇದಕ್ಕಾಗಿ 10 ಎಕರೆ ಜಮೀನು ಮಂಜೂರು ಮಾಡುತ್ತಿರುವುದಾಗಿ ತಿಳಿದುಬಂದಿದೆ. ಗೋ ಶಾಲೆಗೆ ಜಾಗ ಮಂಜೂರು ಮಾಡಲು ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ಪರಿಶಿಷ್ಟರಿಗೆ ಸೇರಿದ ಜಾಗದಲ್ಲಿ ಬೇಡ. ಈ ಸರ್ವೇ ನಂಬರನ್ನು ಬಿಟ್ಟು ಬೇರೆ ಕಡೆ ಅನುಮತಿ ನೀಡಲಿ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]