ಶಿವಮೊಗ್ಗ ಲೈವ್.ಕಾಂ | SHIMOGA | 17 ಫೆಬ್ರವರಿ 2020

ಕನ್ನಡ ಚಿತ್ರಗಳ ಬದಲು ಅನ್ಯ ಭಾಷೆಯ ಸಿನಿಮಾಗಳು ಪ್ರದರ್ಶಿಸುತ್ತಿರುವುದಕ್ಕೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಶಿವಮೊಗ್ಗದ ಚಿತ್ರಮಂದಿರಗಳಲ್ಲಿ ಈ ವಾರ ಕನ್ನಡದ ಯಾವ ಸಿನಿಮಾಗಳು ಪ್ರದರ್ಶನ ಕಾಣುತ್ತಿಲ್ಲ ಎಂದು ಆರೋಪಿಸಿ, ಆಕ್ರೋಶ ವ್ಯಕ್ತವಾಗಿದೆ.

ಶಿವಮೊಗ್ಗ ನಗರವು ಕನ್ನಡ ಸಿನಿಮಾ ವೀಕ್ಷಕರು ಹೆಚ್ಚಿರುವ ಸೆಂಟರ್ ಎಂದು ಗುರುತಿಸಿಕೊಂಡಿದೆ. ಆದರೆ ಐದು ಚಿತ್ರಮಂದಿರಗಳಲ್ಲು ತೆಲುಗು ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರ ಸಿಗುತ್ತಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಈ ನಡುವೆ ಶಿವಮೊಗ್ಗದಂತಹ ಸೆಂಟರ್’ನಲ್ಲಿ ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳದೆ ಇರುವುದು ಆತಂಕಕಾರಿ ಬೆಳವಣಿಗೆ ಎಂಬ ಅಭಿಪ್ರಾಯಗಳು ಇವೆ.

ಮಲ್ಟಿಪ್ಲೆಕ್ಸ್’ನಲ್ಲಿ ಅತಿ ಹೆಚ್ಚು ಕನ್ನಡ ಸಿನಿಮಾ
ಈ ನಡುವೆ ಶಿವಮೊಗ್ಗದ ಮಲ್ಟಿಪ್ಲೆಕ್ಸ್’ನಲ್ಲಿ ಅತಿ ಹೆಚ್ಚು ಕನ್ನಡ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿದೆ. ಕನ್ನಡ ಸಿನಿಮಾಗೆ ವೀಕ್ಷಕರ ಸಂಖ್ಯೆಯು ಹೆಚ್ಚಿದೆ ಅನ್ನುತ್ತಾರೆ ಭಾರತ್ ಸಿನಿಮಾಸ್ ಸಿಬ್ಬಂದಿ. ಸದ್ಯ ಭಾರತ್ ಸಿನಿಮಾಸ್’ನಲ್ಲಿ ಹತ್ತು ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಈ ಪೈಕಿ ಆರು ಕನ್ನಡ, ಎರಡು ತೆಲಗು, ಎರಡು ಹಿಂದಿ ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ.

ಕನ್ನಡದ ಲವ್ ಮಾಕ್’ಟೇಲ್, ದಿಯಾ, ಜಂಟಲ್ ಮನ್, ಮಾಲ್ಗುಡಿ ಡೇಸ್ ಸೇರಿದಂತೆ ಆರು ಕನ್ನಡ ಚಿತ್ರಗಳು ಪ್ರದರ್ಶನವಾಗುತ್ತಿದೆ. ಆದರೆ ಮಲ್ಟಿಪ್ಲೆಕ್ಸ್’ನಲ್ಲಿ ಟಿಕೆಟ್ ದರ ಹೆಚ್ಚಳ ಅನ್ನುವುದು ಪ್ರೇಕ್ಷಕರ ಅಭಿಪ್ರಾಯ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
No Kannada cinemas in Shimoga film theaters led to the critical posts in facebook and other social media platforms.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200