ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 MAY 2021
ಲಾಕ್ ಡೌನ್ ಅವಧಿಯಲ್ಲೂ ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಿ ಮಾಡುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಿರುವ ಹಿನ್ನೆಲೆ ಸಾಲ ವಸೂಲಿಗೆ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಇದು ಸಾಲ ವಸೂಲಿ ಮಾಡುವಂತಹ ಸಂದರ್ಭವಲ್ಲ. ಹಾಗಾಗಿ ಸಾಲ ವಾಪಸ್ ಕೊಡಿ ಅಂತಾ ಯಾರೂ ಟಾರ್ಚರ್ ಮಾಡುವಂತಿಲ್ಲ. ಒಂದು ವೇಳೆ ಸಾಲ ಹಿಂತಿರುಗಿಸದೆ ಇದ್ದರೆ ಹಾಗೆ ಮಾಡ್ತೀವಿ, ಹೀಗೆ ಮಾಡ್ತೀವಿ ಅಂತಾ ಯಾರಾದರೂ ಬೆದರಿಸಿದರೆ ನಮಗೆ ತಿಳಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಮೇ 31ರಿಂದ ಜೂನ್ 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಕನಿಷ್ಠ ಮಟ್ಟದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ ಲಾಕ್ ಡೌನ್, ಕೆಲವು ಸೇವೆಗಳಿಗೆ ವಿನಾಯಿತಿ, ಇಲ್ಲಿದೆ ಲಾಕ್ ಡೌನ್ ಕುರಿತ ಪ್ರಮುಖ ಹತ್ತು ಪಾಯಿಂಟ್
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422