ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022
ಕರೋನ ರೂಲ್ಸ್ ಪಾಲನೆ ಮಾಡುವ ಮೂಲಕ ಮಾದರಿಯಾಗಬೇಕಿದ್ದ ಜನಪ್ರತಿನಿಧಿಗಳೆ ನಿಯಮ ಉಲ್ಲಂಘಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಮರೆತು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಮಲ್ಲೇಶ್ವರ ನಗರದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶಿವಮೊಗ್ಗ ಜಿಲ್ಲಾ ಕಚೇರಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಪ್ರಮುಖರು ಮಾಸ್ಕ್ ಧರಿಸಿರಲಿಲ್ಲ.
ಮಾಸ್ಕ್ ಮರೆತ ಜನಪ್ರತಿನಿಧಿಗಳು
ಕರೋನ ವ್ಯಾಪಕವಾಗಿ ಹರಡುತ್ತಿದೆ. ಜನರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಸರ್ಕಾರ ತಿಳಿಸಿದೆ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಡಾ.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಸೇರಿದಂತೆ ಹಲವರು ಮಾಸ್ಕ್ ಧರಿಸಿರಲಿಲ್ಲ.
ಮಾದರಿಯಾದ ಸಂಸದ, ಮೇಯರ್
ಇನ್ನು, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರು ಮಾಸ್ಕ್ ಧರಿಸಿಕೊಂಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಸಂಸದ ರಾಘವೇಂದ್ರ ಅವರು ಫೋಟೊಗೆ ಪೋಸ್ ಕೊಡಲು ಮಾಸ್ಕ್ ತೆಗೆದಿದ್ದರು. ಕೊನೆಗೆ ಕಾರು ಹತ್ತಿ ಮರಳುವವರೆಗೂ ಇಬ್ಬರು ಮಾಸ್ಕ್ ಧರಿಸಿದ್ದರು. ಮತ್ತೊಂದೆಡೆ, ಕಾರ್ಯಕ್ರಮದ ಕೊನೆ ಹಂತದಲ್ಲಿ ಸಚಿವ ಈಶ್ವರಪ್ಪ ಅವರು ಮಾಸ್ಕ್ ತರಿಸಿಕೊಂಡು ಧರಿಸಿದರು.
ಮಾಸ್ಕ್ ಧರಿಸದೆ ರಸ್ತೆಗಿಳಿಯುವ ಸಾರ್ವಜನಿಕರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದಲ್ಲಿ ದಂಡ ವಿಧಿಸುತ್ತಿದ್ದಾರೆ. ದಂಡ ಕಟ್ಟದಿದ್ದರೆ ಜೈಲಿಗೆ ಕಳುಹಿಸುತ್ತೇವೆ ಎಂದ ಬೆದರಿಕೆಯನ್ನು ಒಡ್ಡುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳ ವಿಚಾರಕ್ಕೆ ಬಂದಾಗ ಅಧಿಕಾರಿಗಳು ತುಟಿ ಬಿಚ್ಚದಿರುವುದು ವಿಪರ್ಯಾಸ.
ಇದನ್ನೂ ಓದಿ | ಮಾಸ್ಕ್ ದಂಡ ಹಾಕಲು ಬಂದ ಶಿವಮೊಗ್ಗ ಪಾಲಿಕೆ ಅಧಿಕಾರಿಗಳಿಗೆ ನಡುರಸ್ತೆಯಲ್ಲಿ ಜನರಿಂದ ಕ್ಲಾಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200