ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಒಂದೆಡೆ ಆಕ್ಸಿಜನ್ ಕೊರತೆಯ ಭೇತಿ ಇದ್ದರೆ, ಮತ್ತೊಂದೆಡೆ ಶಿವಮೊಗ್ಗದಲ್ಲಿ ಆಕ್ಸಿಜನ್ ಬೆಡ್ಗಳಿಗೆ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆ ಮುಂಭಾಗವೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡು ಹಾಕಲಾಗಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲಾಗಿದೆ. ಉಸಿರಾಟದ ಸಮಸ್ಯೆ ಮತ್ತು ಆಕ್ಸಿಜನ್ ತುರ್ತು ಅಗತ್ಯವಿರುವ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದಂತಾಗಿದೆ.
ಎಷ್ಟು ಬೆಡ್ ಮೀಸಲಾಗಿದೆ?
ಮೆಗ್ಗಾನ್ ಆಸ್ಪತ್ರೆಯಲ್ಲಿ 400 ಆಕ್ಸಿಜನ್ ಬೆಡ್ಗಳಿವೆ. ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚಳವಾಗುತ್ತಿದೆ. ಇದರಿಂದ ಬೆಡ್ಗಳು ಭರ್ತಿಯಾಗಿದ್ದು, ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಡಳಿತ ಹೇಳುತ್ತಿದೆ. ಆದರೆ ಆಕ್ಸಿಜನ್ ಬೆಡ್ ಕೊರತೆ ಎಂದು ಆಸ್ಪತ್ರೆ ಮುಂದೆ ಬೋರ್ಡ್ ಹಾಕಿರುವುದು ಸೋಂಕಿತರಲ್ಲಿ ಆತಂಕ ಮೂಡಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲದ ವಿಡಿಯೋ ರಿಪೋರ್ಟ್..
ಆಸ್ಪತ್ರೆ ಆಡಳಿತ ಹೇಳೋದೇನು?
ಆಕ್ಸಿಜನ್ ಪ್ರಮಾಣಕ್ಕೆ ತಕ್ಕಂತೆ ಬೆಡ್ಗಳನ್ನು ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅದಕ್ಕಿಂತಲೂ ಹೆಚ್ಚು ಬೆಡ್ ವ್ಯವಸ್ಥೆ ಮಾಡಿ, ಬಳಿಕ ಆಕ್ಸಿಜನ್ ಇಲ್ಲದೆ ಸೋಂಕಿತರು ನರಳುವುದು ಬೇಡ. ಸಂಜೆ ವೇಳೆಗೆ ಹೆಚ್ಚುವರಿ ಆಕ್ಸಿಜನ್ ಬಳಿಕ ಉಳಿದ ವ್ಯವಸ್ಥೆ ಮಾಡುವುದಾಗಿ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ಶ್ರೀಧರ್ ಫೋನ್ ಮೂಲಕ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]