ಶಿವಮೊಗ್ಗ ಸಿಟಿಯ ವಿವಿಧೆಡೆ ವಾಹನ ನಿಲುಗಡೆ ನಿಷೇಧ, ಸಂಚಾರ ಮಾರ್ಗ ಬದಲಾವಣೆ, ಎಲ್ಲೆಲ್ಲಿ?

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಸಲುವಾಗಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಸೂಚನೆ ಹೊರಡಿಸಿದ್ದಾರೆ.

ಸೆ.25ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಆದ್ದರಿಂದ ಅಂದು 6 ರಿಂದ ರಾತ್ರಿ 12 ಗಂಟೆವರೆಗೆ ನಿಯಮ ಜಾರಿಯಲ್ಲಿರಲಿದೆ.

Hindu-Mahasabha-Ganesha-procession-tomorrow

ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ?

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಆರಂಭವಾಗಿ ಎಸ್‌ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ಎನ್ ಸರ್ಕಲ್, ಎ.ಎ.ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಆದೇಶದಲ್ಲಿ ತಿಳಿಸಲಾಗಿದೆ.

ವಾಹನ ಮಾರ್ಗಗಳ ಬದಲಾವಣೆ

point-1

ಬೆಂಗಳೂರು, ಭದ್ರಾವತಿ, ಎನ್ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನಗಳು ಎಂಆರ್‌ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರ ತೆರಳುವುದು.

point-2

ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ವಾಹನಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ತೆರಳುವುದು.

point-3

ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್ ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್, ಬೈಪಾಸ್ ರಸ್ತೆ ಮುಖಾಂತರ ತೆರಳಬೇಕು.

point-4

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೋಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ, ಸವಳಂಗ ರಸ್ತೆ ಮುಖಾಂತರ ತೆರಳಬೇಕು.

point-5

ಶಿಕಾರಿಪುರ, ಸೊರಬ, ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್ ಲಕ್ಷ್ಮಿ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ, ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸಬೇಕು.