ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ನಗರದ ಜಯನಗರ ಮುಖ್ಯ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮತ್ತು ನೋ ಪಾರ್ಕಿಂಗ್‌ಗೆ (No Parking) ಸ್ಥಳ ಗುರುತಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಧಿಸೂಚನೆಗೆ ಕಾರಣವೇನು?
ಶಿವಮೂರ್ತಿ ಸರ್ಕಲ್‌ನಲ್ಲಿ ಮೆಟ್ರೋ ಆಸ್ಪತ್ರೆ ಇದೆ. ಜಯನಗರ ಮುಖ್ಯ ರಸ್ತೆಯಲ್ಲಿ ನೆಹರು ಕ್ರೀಡಾಂಗಣದ ಗೇಟ್, ಸರ್ವೋದಯ ಶಿಕ್ಷಣ ಸಂಸ್ಥೆ ಇದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಾರ್ಕಿಂಗ್ ಮತ್ತು ನೋ ಪಾರ್ಕಿಂಗ್ ಸ್ಥಳ ಗುರುತಿಸಿ ಅಧಿಸೂಚನೆ ಹೊರಡಿಸಲಾಗಿದೆ
ಎಲ್ಲೆಲ್ಲಿ ನೋ ಪಾರ್ಕಿಂಗ್?
ಜಯನಗರ ಮುಖ್ಯ ರಸ್ತೆಯಲ್ಲಿ ಶಿವಮೂರ್ತಿ ಸರ್ಕಲ್ನಿಂದ ಡಿ.ಸಿ. ಕಾಂಪೌಂಡ್‍ವರೆಗೆ ಎಡಭಾಗ ಮತ್ತು ಜಯನಗರ ಮುಖ್ಯರಸ್ತೆಯಲ್ಲಿ ಶಿವಮೂರ್ತಿ ಸರ್ಕಲ್‍ನಿಂದ ಜಯನಗರ 1ನೇ ಕ್ರಾಸ್ ಬಲಭಾಗ ಎಲ್ಲಾ ವಾಹನಗಳ ನಿಲುಗಡೆ ನಿಷೇದಿಸಲಾಗಿದೆ (No Parking).
ಎಲ್ಲೆಲ್ಲಿ ಪಾರ್ಕಿಂಗ್ ಇದೆ?
ಜಯನಗರ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕ ಶೌಚಾಲಯದಿಂದ ಡಿ.ಸಿ. ಕಾಂಪೌಂಡ್‍ವರೆಗೆ ಬಲಭಾಗ ವಾಹನಗಳ ನಿಲುಗಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿರುತ್ತಾರೆ.
ಇದನ್ನೂ ಓದಿ – ಕರ್ನಾಟಕ ಸಂಘದಲ್ಲಿ ಕಾರು ತಡೆದ ಪೊಲೀಸ್, ಡ್ರೈವರ್ ತಂದೆಗೆ 25 ಸಾವಿರ ರೂ. ಫೈನ್, ಏನಿದು ಕೇಸ್?